ತಮಿಳುನಾಡು: ‘VB-G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದ್ದೂ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮಿಳುನಾಡು ವಿಧಾನಸಭೆಯಲ್ಲಿ ಈ ನಿರ್ಣಯವನ್ನು ಮಂಡಿಸಿದ್ದು, ಸಭೆಯಲ್ಲಿನ ಸದಸ್ಯರು ಧ್ವನಿಮತದ ಮೂಲಕ ಇದನ್ನು ಅನುಮೋದಿಸಿದ್ದಾರೆ.
ಇದನ್ನೂ ಓದಿ: ಎಸ್‌ಐಆರ್ ಆತಂಕದಿಂದ ದಿನಕ್ಕೆ 3-4 ಜನರು ಆತ್ಮಹತ್ಯೆ: ಮಮತಾ ಬ್ಯಾನರ್ಜಿ ಆರೋಪ
ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್, ಮಹಾತ್ಮಾ ಗಾಂಧಿ ರಾಷ್ಟ್ರಪಿತ ಮತ್ತು ಸಾಮಾಜಿಕ ನ್ಯಾಯದ ಸಂಕೇತ. ಅವರ ಹೆಸರನ್ನು ತೆಗೆದು ಹಾಕುವ ಯಾವುದೇ ಪ್ರಯತ್ನವನ್ನು ತಮಿಳುನಾಡು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ನಿರ್ಣಯದ ಮೂಲಕ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂಬ ಸಂದೇಶವನ್ನು ತಮಿಳುನಾಡು ರವಾನಿಸಿದೆ.
ಈ ಮೊದಲು ಪಂಜಾಬ್ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಸಹ ಇದೇ ಕಾಯ್ದೆಯ ವಿರುದ್ಧ ವಿಧಾನಸಭೆಗಳಲ್ಲಿ ನಿರ್ಣಯಗಳನ್ನು ಅಂಗೀಕರಿಸಿದ್ದವು. ಇದೀಗ ತಮಿಳುನಾಡು ಕೂಡ ಆ ರಾಜ್ಯಗಳ ಸಾಲಿಗೆ ಸೇರಿದ್ದು, ಕೇಂದ್ರ ಸರ್ಕಾರದ ಮೇಲೆ ರಾಜಕೀಯ ಒತ್ತಡ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.
ಇದನ್ನೂ ನೋಡಿ: ಕೇಂದ್ರದ ಪ್ರಭಾವದ ನೆರಳಲ್ಲಿ ಕರ್ನಾಟಕದ ರಾಜಪಾಲರು? Janashakthi Media
