ಕೋಲ್ಕತ್ತಾ | ಗಡಿ ಭಾಗದ ಬಂಗಾಳಿಗರು ಶಾಂತಿಯಿಂದ ಇರುವಂತೆ ಸಿಎಂ ಮಮತಾ ಬ್ಯಾನರ್ಜಿ ಮನವಿ

ಕೋಲ್ಕತ್ತಾ: ಗಡಿ ಭಾಗದಲ್ಲಿ ಬಂಗಾಳಿಗರು ಶಾಂತಿಯಿಂದ ಇರುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮನವಿ ಮಾಡಿದ್ದಾರೆ. ನೇಪಾಳದಾದ್ಯಂತ ‘ಜೆನ್‌–ಝೀ’ ಬ್ಯಾನರ್‌ ಅಡಿಯಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದು.  ಕೋಲ್ಕತ್ತಾ

ಅಲ್ಲಿನ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ನಂತರ ಅಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಕೋಲ್ಕತ್ತಾ

ಇದನ್ನೂ ಓದಿ: ರಾಯಚೂರು | ನವೋದಯ ದಂತ ಕಾಲೇಜಿನ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿ ಉಪಕರಣಕ್ಕೆ ಚಾಲನೆ

ಆದರೆ, ಅಲ್ಲಿನ ತೊಂದರೆಗಳು ನಮಗೆ ಸಂಬಂಧಿಸಿದ್ದಲ್ಲ. ನಾವು ಮಧ್ಯ ಪ್ರವೇಶಿಸಲು ಕೂಡ ಸಾಧ್ಯವಿಲ್ಲ. ನೇಪಾಳದ ಗಡಿಯಲ್ಲಿರುವ ಪ್ರದೇಶಗಳಲ್ಲಿ ಜನರು ಶಾಂತಿಯಿಂದ ಇರುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ. ‘ನಾವು ನಮ್ಮ ನೆರೆಯ ದೇಶಗಳಾದ ನೇಪಾಳ, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳನ್ನು ಪ್ರೀತಿಸುತ್ತೇವೆ.

ವಿದೇಶಾಂಗ ನೀತಿಯು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ನೇಪಾಳದೊಂದಿಗಿನ ರಾಜತಾಂತ್ರಿಕ ಸಂಬಂಧದ ಬಗ್ಗೆ ಗಮನಹರಿಸಲಿ. ನಮ್ಮ ನೆರೆಯ ದೇಶದಲ್ಲಿ ನಾವು ಶಾಂತಿಯನ್ನು ಬಯಸುತ್ತೇವೆ ಎಂದು ತಿಳಿಸಿದ್ದಾರೆ.

ನೇಪಾಳದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ದಯವಿಟ್ಟು ಪತ್ರಕರ್ತರು ನಿಮ್ಮ ಜೀವವನ್ನು ಪಣಕ್ಕಿಟ್ಟು ವರದಿ ಮಾಡಲು ಅಲ್ಲಿಗೆ ತೆರಳಬೇಡಿ. ಒಂದು ವೇಳೆ ತೆರಳಲೇಬೇಕಾದರೆ, ಪೊಲೀಸರಿಗೆ ಮೊದಲೇ ಮಾಹಿತಿ ನೀಡಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ನೋಡಿ : ಪರಿಷ್ಕೃತ ಜಿಎಸ್ ಟಿ : ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ? Janashakthi Media

Donate Janashakthi Media

Leave a Reply

Your email address will not be published. Required fields are marked *