ವಿಜಯನಗರ: ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ಜಿಲ್ಲೆ 10 ನೇ ಸ್ಥಾನದಿಂದ 27 ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಡುಕಿದ ಸಿಎಂ ಸಿದ್ದರಾಮಯ್ಯ, ಇದಕ್ಕೆ ಅಧಿಕಾರಿಗಳು ಕಾರಣ ಎಂದು ಡಿಡಿಪಿಐ ಮತ್ತು ಬಿಇಒ ಅವರ ಅಮಾನತಿಗೆ ಸೂಚಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿಂದು ವಿಜಯ ಜಿಲ್ಲಾ ಪ್ರಗತಿಪರಿಶೀಲನಾ ನಡೆಯಿತುನ
ಸಭೆಯಲ್ಕಿ ಮಾತನಾಡಿದ ಸಿಎಂ, ಎಸ್ಎಸ್ಎಸ್ಸಿ ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಿಲಿತಾಂಶ ಪ್ರಮಾಣ ಕುಸಿದಿರುವುದಕ್ಕೆ ಈ ಅಧಿಕಾರಿಗಳೇ ಕಾರಣ. ಬಿಇಒ ಗಳು, ಶಿಕ್ಷಕರ ಪ್ರಯತ್ನ ಏನು? ಯಾವ ದಿಕ್ಕಿನಲ್ಲಿದೆ? ಈ ಕಳಪಡೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ ಎಂದು ಸಿಎಂ ಡಿಡಿಪಿಐ ಗೆ ಪ್ರಶ್ನಿಸಿದರು.
ಇದನ್ನೂ ಓದಿ: ಭ್ರೂಣಲಿಂಗ ಪತ್ತೆ ಮಾಹಿತಿ ನೀಡುವವರಿಗೆ ಬಹುಮಾನದ ಮೊತ್ತ ಏರಿಕೆ
ಈ ಬಾರಿ ಶೇ20ರಷ್ಟು ಗ್ರೇಸ್ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದ್ದೀರಿ ಎಂದರೆ ನಿಮ್ಮ ಒಟ್ಟು ಸಾಧನೆ ಬಗ್ಗೆ ನಿಮಗೆ ಸಮಾಧಾನ ಇದೆಯೇ ಎಂದು ಪ್ರಶ್ನಿಸಿದರು.
10 ರಿಂದ 27ನೇ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕು ಎಂದರು. ಸಭೆ ನಡುವೆಯೇ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್‌ಗೆ ದೂರವಾಣಿ ಕರೆ ಮಾಡಿದ ಸಿಎಂ, ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು.
ಸಿಇಒ ಅವರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿ ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು. ಡಿಡಿಪಿಐ ಅವರನ್ನು ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರು ಸಭೆಯಿಂದ ಹೊರಗೆ ನಡೆಯುವಂತೆ ಸೂಚಿಸಿದರು.
ಇದನ್ನೂ ನೋಡಿ: ಅಂಗನವಾಡಿ ಕಾರ್ಯಕರ್ತರು ಪಿಯುಸಿ, ಪದವಿ ಮುಗ್ಸಿದ್ದಾರೆ, Janashakthi Media