ಮೈಸೂರು: ಕಲುಷಿತ ನೀರು ಸೇವನೆ ಸಂಬಂಧ ಅಸ್ವಸ್ಥರಾದವರಿಗೆ ಸೂಕ್ತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ: ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಸಿಎಂ ಮಾಹಿತಿ ಪಡೆದಿದ್ದು, ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿ,ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.
ಇದನ್ನೂ ನೋಡಿ: ಮಣ್ಣಿನ ಮಕ್ಕಳು’ ಎಂದು ಹೇಳಿಕೊಂಡು ದೌರ್ಜನ್ಯ ನಡೆಸಿದ್ದೆ ಜಾಸ್ತಿ | ರೇವಣ್ಣ ರಿಪಬ್ಲಿಕ್Janashakthi Media