ಮುಖ್ಯಮಂತ್ರಿ ಸೇರಿದಂತೆ ಸಂಪುಟ ಸಚಿವರಿಗೆ ಕೊರೊನಾ ದೃಢ: ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ವ್ಯಾಪಿಸುವಿಕೆ ಹೆಚ್ಚಿನ ತೀವ್ರವಾಗಿದ್ದು, ಈ ಹಿಂದಿನ ಎರಡು ಅಲೆಗಿಂತ ಕ್ಷಿಪ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಅನೇಕ ರಾಜಕೀಯ ನಾಯಕರುಗಳು ಕೋವಿಡ್‌ ಸೋಂಕಿಗೆ ತುತ್ತಾಗುತ್ತಿದ್ದಾರೆ.

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಇಂದು ರಾಜ್ಯ ಸಚಿವ ಸಂಪುಟದ ಮತ್ತೊಬ್ಬ ಸಚಿವ ಜೆ ಸಿ ಮಾಧುಸ್ವಾಮಿ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದ್ದು ಅವರು ಮತ್ತು ಅವರ ಪುತ್ರಿಗೆ ಪಾಸಿಟಿವ್ ಕಂಡುಬಂದಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗಾಗಿ ದಾಖಲಾಗಿದ್ದಾರೆ.

ಈ ಹಿಂದೆ ಸಚಿವ ಸಂಪುಟದ ಸಚಿವರುಗಳಾದ ಆರ್ ಅಶೋಕ್ ಮತ್ತು ಬಿ ಸಿ ನಾಗೇಶ್ ಅವರಿಗೆ ಕೊರೊನಾ ಪಾಸಿಟಿವ್ ಬಂದು ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಮುಖ್ಯಮಂತ್ರಿಗಳೊಂದಿಗೆ ನೇರ ಸಂಪರ್ಕದಲ್ಲಿದ ಸಚಿವರು, ಅಧಿಕಾರಿಗಳಿಗೆ ಕೊರೊನಾ ಆತಂಕ ಶುರುವಾಗಿದೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನೇದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಲೇ ಇದೆ. ಫೆಬ್ರವರಿ ಹೊತ್ತಿಗೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗುವ ಸಾಧ್ಯತೆಯಿದ್ದು ಈ ಹೊತ್ತಿನಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಆದ್ಯತೆಯಾಗಿ ವಾರ ಅಥವಾ 10 ದಿನಗಳ ಮಟ್ಟಿಗೆ ಲಾಕ್‌ಡೌನ್ ಜಾರಿಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರೋಗ್ಯ ಇಲಾಖೆ ಸಭೆ: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಆರೋಗ್ಯ ಇಲಾಖೆ ಅಧಿಕಾರಿಗಳ ತುರ್ತು ಸಭೆ ಕರೆದಿದ್ದು ಇಂದು ಮಧ್ಯಾಹ್ನದ ನಂತರ ಸಭೆ ನಡೆಯಲಿದ್ದು, ಈ ಸಭೆ ವರ್ಚುವಲ್ ಆಗಿರುತ್ತದೆ.

ಸಿಎಂ ಮಹತ್ವದ ಸಭೆ: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹಿಂದಿನ ದಿನ ದಿನಕ್ಕೆ 15 ಸಾವಿರಕ್ಕೂ ಹೆಚ್ಚು ವರದಿಯಾಗುತ್ತಿದ್ದು, ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎನ್ನಲಾಗಿದೆ. ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 3 ಗಂಟೆಗೆ ವರ್ಚುವಲ್ ಮೂಲಕ ಮಣಿಪಾಲ್ ಆಸ್ಪತ್ರೆಯಿಂದ ಮಹತ್ವದ ಸಭೆ ಕರೆದಿದ್ದಾರೆ. ಇದರಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆಯಾಗಲಿದೆ.

Donate Janashakthi Media

Leave a Reply

Your email address will not be published. Required fields are marked *