ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಹಗರಣ ಎಸ್‌ಐಟಿಗೆ ವಹಿಸಲು ಸಲಹೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸುಮಾರು 6 ಲಕ್ಷ ಠೇವಣಿದಾರರಿದ್ದ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸುಮಾರು ಎರಡೂವರೆ ಸಾವಿರ ಕೋಟಿ ಅಕ್ರಮ ನಡೆದಿದ್ದು, ಇದರಿಂದ 3 ಲಕ್ಷ ಠೇವಣಿದಾರರು ಮೋಸಹೋಗಿದ್ದು, ಇದರಲ್ಲಿ 200ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಈ ಎಲ್ಲಾ ಹಗರಣದ ಬಗ್ಗೆ ಎಸ್‌ಐಟಿ ರಚನೆ ಮಾಡುವಂತೆ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ. ಸಿದ್ದರಾಮಯ್ಯ

ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯೊಂದಿಗೆ ಬ್ಯಾಂಕಿನ ಸಂತ್ರಸ್ತರ ಪರವಾಗಿ ಹೋರಾಟ ಮಾಡುತ್ತಿರುವ ಹೋರಾಟಗಾರರ ನಿಯೋಗ ಭೇಟಿ ಮಾಡಿ, ಪ್ರಕರಣದಲ್ಲಿ ಅನಗತ್ಯ ತೊಂದರೆ ನೀಡಲಾಗುತ್ತಿದೆ. ಇಂದು ಈ ಬ್ಯಾಂಕ್ ಗಳ ಠೋವಣಿದಾರರು ಬೀದಿಗೆ ಬಿದ್ದಿದ್ದು, ನ್ಯಾಯ ಒದಗಿಸಿಕೊಡಬೇಕು ಮನವಿ ಮಾಡಿದರು. ಪ್ರಿಯಾಂಕಾ ಗಾಂಧಿ ವಾದ್ರಾಮ ಕೇರಳಕ್ಕೆ ತೆರಳುವ ಮುನ್ನ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ನೊಂದ ಜನರನ್ನು ಭೇಟಿ ಮಾಡಿ ಅವರ ಅಳಲನ್ನು ಆಲಿಸಿದರು.

ಇದನ್ನು ಓದಿ : ಚುನಾವಣಾ ಆಯೋಗದಿಂದ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಕುರಿತು ಸ್ಪಷ್ಟೀಕರಣ ಕೇಳಿದ ಸುಪ್ರೀಂ ಕೋರ್ಟ್

6 ಲಕ್ಷ ಠೇವಣಿದಾರರಿದ್ದ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 15,000 ಕ್ಕೂ ಹೆಚ್ಚು ಠೇವಣಿದಾರರಿಗೆ ಅನ್ಯಾಯವಾಗಿದೆ ಎಂಬ ಆರೋಪ ಇದೆ. ಸಂತ್ರಸ್ತರು ಹಲವು ಸಮಯಗಳಿಂದ ಹೋರಾಟ ಮಾಡ್ತಿದ್ದಾರೆ. ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ನೀಡಲಾಗಿದೆ. ಆದರೆ ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ ಎಂಬುದು ಸಂತ್ರಸ್ತರ ಆರೋಪವಾಗಿದೆ
ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಬ್ಯಾಂಕಿನ ಹಗರಣ ವಿರುದ್ಧ ಪ್ರತಿಭಟನೆ ನಡೆಸಿದಾಗ, ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಬಿಜೆಪಿ ಭರವಸೆ ನೀಡಿತ್ತಾದರೂ ಇನ್ನೂ ಸಹ ಸಿಬಿಐ ತನಿಖೆಗೆ ಆದೇಶ ನೀಡಲಿಲ್ಲ. ಆ ಈ ಹಗರಣದಲ್ಲಿ ಬಿಜೆಪಿ ನಾಯಕರ ಕೈವಾಡವಿರುವ ಕಾರಣ ಸಿಬಿಐ ಅಧಿಕಾರಿಗಳು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ತೀರ್ಮಾನಿಸಿದೆ. ಕೆಲವು ಮಾರ್ಗಸೂಚಿಗಳ ನಂತರ ಬ್ಯಾಂಕ್ ಗಳ ಪ್ರಕರಣವನ್ನು ಸಿಬಿಐನಿಂದಲೇ ತನಿಖೆಯಾಗಬೇಕಿದೆ. ಸಿದ್ದರಾಮಯ್ಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ಚುನಾವಣೆ ಸಮಯದಲ್ಲಿ ಈ ಸಂತ್ರಸ್ತರು ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ರೊಚ್ಚಿಗೆದ್ದಿರುವ ವಿಡಿಯೋ ನೋಡಿದೆ. ಸಿಬಿಐ ಈ ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡದಿದ್ದರೆ ರಾಜ್ಯ ಸರ್ಕಾರವೇ ವಿಶೇಷ ತನಿಖಾ ತಂಡವನ್ನು ರಚಿಸಿ ಇವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಪ್ರಿಯಾಂಕಾ ಗಾಂಧಿ ಅವರು ನಮ್ಮ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಈ ವಿಚಾರವಾಗಿ ನನಗೂ ನಿರ್ದೇಶನ ನೀಡಿದ್ದು, ಚುನಾವಣೆ ನಂತರ ಈ ಬಗ್ಗೆ ತೀರ್ಮಾನ ಮಾಡಿ ಸಂತ್ರಸ್ತರಿಗೆ ನ್ಯಾಯ ಒದಗಿಸಲಾಗುವುದು ಎಂದರು.

ಇದನ್ನು ನೋಡಿ : ‘ಮೋದಿ ಗ್ಯಾರಂಟಿಗಳ’ ಮರೆಮೋಸದ ವಿವರಗಳು ಗೊತ್ತೇ? Janashakthi Media

Donate Janashakthi Media

Leave a Reply

Your email address will not be published. Required fields are marked *