ಶಿಕ್ಷಕರ ದಿನಾಚರಣೆ ಅಂಗವಾಗಿ 43 ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಇದನ್ನೂ ಓದಿ:75 ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ : ಸೆ.5ರ ಶಿಕ್ಷಕರ ದಿನ ರಾಷ್ಟ್ರಪತಿ ಮುರ್ಮು ಪ್ರದಾನ

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಹಲವು ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *