ಎಚ್. ವಿ. ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಕಾರ್ಮಿಕರ ಹೋರಾಟದಲ್ಲಿ ತಮ್ಮ ಜೀವಿತದ ಕೊನೆಕ್ಷಣದವರೆಗೂ ಸಕ್ರಿಯರಾಗಿದ್ದ ಅನಂತ ಸುಬ್ಬಾರಾವ್ ಅವರೊಬ್ಬ ಬದ್ಧತೆಯ ಸಿಪಿಐ ನಾಯಕರಾಗಿದ್ದರು ಎಂದು ಜನವರಿ 29ರಂದು ಎಚ್.ವಿ. ಅನಂತ ಸುಬ್ಬರಾವ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಿಧನ

ಕಾಮ್ರೆಡ್ ಅನಂತ ಸುಬ್ಬರಾವ್ ಕಾರ್ಮಿಕರ ಧ್ವನಿಯಾಗಿ ಹಲವು ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ತಿಂಗಳ ಹಿಂದೆ ನಡೆದ ಕೆಎಸ್ಸಾರ್ಟಿಸಿ ನೌಕರರ ಪ್ರತಿನಿಧಿಯಾಗಿ ಅವರನ್ನು ಭೇಟಿ ಮಾಡಿದ್ದರು. ಅವರು ಕೆಎಸ್ಸಾರ್ಟಿಸಿಯ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ, ಸಿಬ್ಬಂದಿ ಯೂನಿಯನ್ ನ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತಡೆ ನೀಡಲಾಗದು: ಹೈಕೋರ್ಟ್‌

ಬದ್ಧತೆಯ ಜಾತ್ಯತೀತ ಹಾಗೂ ಸಿಪಿಐ ನಾಯಕರಾಗಿದ್ದರು. ಅವರ ಸಾವಿನಿಂದ ರಾಜ್ಯಕ್ಕೆ ನಷ್ಟವುಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭರಿಸಲು ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. ನಿಧನ

ಕಾರ್ಮಿಕರ ಹೋರಾಟದಲ್ಲಿ ತಮ್ಮ ಜೀವಿತದ ಕೊನೆಕ್ಷಣದವರೆಗೂ ಸಕ್ರಿಯರಾಗಿದ್ದ ಅನಂತ ಸುಬ್ಬಾರಾವ್ ಅವರು ನನಗೆ ಚಿರಪರಿಚಿತರು. ನಾನು ಸಾರಿಗೆ ಸಚಿವನಾಗಿದ್ದ ಸಂದರ್ಭದಿಂದಲೂ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವುದಾಗಿ ತಿಳಿಸಿದರು.

ಇದನ್ನೂ ನೋಡಿ: ಸತ್ಯಾನ್ವೇಷಣೆ 100 | ಸತ್ಯದೊಂದಿಗೆ ಮಾಡಿದ ಪ್ರಯೋಗಗಳ ಅನುಸಂಧಾನವೇ ಗಾಂಧೀಜಿಯವರ ಆತ್ಮಕಥನ – ಡಾ. ಮೀನಾಕ್ಷಿ ಬಾಳಿ

Donate Janashakthi Media

Leave a Reply

Your email address will not be published. Required fields are marked *