ಬೆಂಗಳೂರು : 78 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆ ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ಮಾತನಾಡಿದ್ದು , ನಾಡಿನ ಜನತೆಗೆ 78 ನೇ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದ್ದಾರೆ.
ಕಳೆದ 77 ವರ್ಷಗಳಲ್ಲಿ ಕರ್ನಾಟಕ ಮಹತ್ವದ ಪಾತ್ರ ಹೊಂದಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ : ಸ್ವಾತಂತ್ರ್ಯೋತ್ಸವದಂದು ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಪ್ರತಿಭಟನೆ; ಕೋಲ್ಕತ್ತಾ
ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ , ೀವರೆಗೆ 25,258 ಕೊಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಈವರೆಗೆ 4.08 ಕೋಟಿ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಯೋಜನೆ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಗೆ 8,844 ಕೋಟಿ ರೂ. ನೀಡಲಾಗಿದೆ. ಯುವನಿಧಿ ಯೋಜನೆಗೆ 1.31 ಲಕ್ಷ ಪದವೀಧರ, ಡಿಪ್ಲೋಮಾ ನಿರುದ್ಯೋಗಿಗಳಿಗೆ ಸಹಾಯಧನ ನೀಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಹೊಸ ಯೋಜನೆ ಜಾರಿಗೆ ತರುತ್ತೇವೆ. ಬ್ರಾಂಡ್ ಬೆಂಗಳೂರು ಮೂಲಕ ನಗರವನ್ನು ವಿಶ್ವದರ್ಜೆಯ ನಗರವನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನು ನೋಡಿ : ಸಿದ್ದರಾಮಯ್ಯ – ಮುಖ್ಯಮಂತ್ರಿ, ಕರ್ನಾಟಕ ಸರ್ಕಾರJanashakthi Media