ಬೆಂಗಳೂರು : ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಲತಾಣ “ಎಕ್ಸ್” ಖಾತೆಯಲ್ಲಿ ಹೇಳಿದ್ದಾರೆ.
ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದು ಹೇಳಿದರು.
ಇದನ್ನೂ ಓದಿ: ಕಟ್ಟಾಯ ಸರ್ಕಾರಿ ಪ್ರೌಢಶಾಲೆಯಲ್ಲಿ ಬ್ರಹ್ಮಾಂಡದ ವಿಸ್ಮಯಗಳ ಅನಾವರಣ: ವಿಜ್ಞಾನ ಸಂವಾದ ಕಾರ್ಯಕ್ರಮ
ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ: ಗಾಂಧೀಜಿಯವರ ವಿಚಾರಗಳೊಂದಿಗೆ ಮುಖಾಮುಖಿ ಆಗಬೇಕಿದೆ – ಬರಗೂರು ರಾಮಚಂದ್ರಪ್ಪ Janashakthi Media
