ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ಪ್ರತಿ ಟನ್‌ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಈ ನಡುವಲ್ಲೇ ನವೆಂಬರ್‌ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಕಬ್ಬು

ಸಭೆಯಲ್ಲಿ 38ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಆರ್.ಬಿ. ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ,

ಇದನ್ನೂ ಓದಿ: ಶ್ರವಣದೋಷವುಳ್ಳ ವಕೀಲರು ಅಪರೂಪದ ಅಲ್ಪಸಂಖ್ಯಾತರು : ಹೈಕೋರ್ಟ್‌

ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.

ಸಭೆಯ ಆರಂಭದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವಾದ ಮಂಡಿಸಿದ್ದು, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿ ಉತ್ತಮ ಆಗಲು ರಾಜ್ಯ ಸರ್ಕಾರ ಸಹಕರಿಸಬೇಕು, ಜೊತೆಗೆ ಕಾರ್ಖಾನೆಗಳಿಂದ ಖರೀದಿ ಮಾಡುವ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 5.50 ರೂ. ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ಅಷ್ಟೇ ಅಲ್ಲದೇ, ಸಕ್ಕರೆ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು. ವಾಣಿಜ್ಯ ಮತ್ತು ಗೃಹ ಬಳಕೆ ಸಕ್ಕರೆ ಪ್ರತ್ಯೇಕವಾಗಿ ದರ ಏರಿಕೆ ಮಾಡಬೇಕು. ಎಥೆನಾಲ್ ಹಂಚಿಕೆ ಪ್ರಮಾಣದಲ್ಲಿ ಏರಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ನೋಡಿ: ಕಾರ್ಮಿಕರ ಮಕ್ಕಳ ʼಶಿಕ್ಷಾದೀಪʼ ಸಿoಘ್ವಿ ಚಾರಿಟೇಬಲ್ ಟ್ರಸ್ಟ್ Janashakthi Media

Donate Janashakthi Media

Leave a Reply

Your email address will not be published. Required fields are marked *