ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಜೂನ್ 24 ಮಂಗಳವಾರದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರನ್ನು ಭೇಟಿಯಾಗಿದ್ದಾರೆ.
ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸಿಎಂ ಸಿದ್ದರಾಮಯ್ಯ, ರಾಜ್ಯದ 24 ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳಿಗೆ ಅಂಕಿತ ಹಾಕುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಮನೆ ಮನೆಗೂ ಪೊಲೀಸ್ ಯೋಜನೆ ಪರಿಶೀಲನೆ ಹಂತದಲ್ಲಿದೆ: ಡಾ. ಜಿ. ಪರಮೇಶ್ವರ
ಇನ್ನು ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯದ ಬಗ್ಗೆಯೂ ದ್ರೌಪದಿ ಮುರ್ಮು ರ ಗಮನ ಸೆಳೆದಿದ್ದಾರೆ ಎನ್ನಲಾಗಿದ್ದು, ವಿಧಾನಪರಿಷತ್‌ಗೆ ಸದಸ್ಯರ ನೇಮಕಾತಿ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ಸಂಬಂಧಪಟ್ಟಂತೆ ಹೈಕಮಾಂಡ್ ನಾಯಕರ ಜೊತೆ ಇಂದು ಸಂಜೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್ ನಟ ಅಮಿರ್ ಖಾನ್ ಅವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ಅವರು, ಉಭಯ ಕುಶಲೋಪರಿ ನಡೆಸಿ ಮುಂದಿನ ಚಿತ್ರಗಳಿಗೆ ಒಳಿತಾಗಲಿ ಎಂದು ಶುಭ ಹಾರೈಸಿದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದನ್ನೂ ನೋಡಿ: POSH ಕಾಯ್ದೆ ಎಂದರೇನು ಮತ್ತು ಅದು ಹೇಗೆ ಕೆಲಸ ಮಾಡುತ್ತದೆ?Janashakthi Media
