ಎಲ್ಲಿ ಅಕ್ರಮ, ಕ್ಷೇತ್ರದ ಹೆಸರು ಬಹಿರಂಗ ಪಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಾರಾಷ್ಟ್ರದಲ್ಲಿ ಚುನಾವಣಾ ಅಕ್ರಮ ನಡೆದಿರುವುದರಿಂದಲೇ ಬಿಜೆಪಿ ಮೈತ್ರಿಕೂಟ ಅಭೂತಪೂರ್ವ ಜಯವನ್ನು ಸಾಧಿಸಿತು ಎಂದು ವಿಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಈಗ, ಕರ್ನಾಟಕದ ಒಂದು ಕ್ಷೇತ್ರದಲ್ಲೂ ಅಕ್ರಮ ನಡೆದಿದೆ ಎಂದು ಹೇಳಿದ್ದರು. ಅದಕ್ಕೆ ಈಗ, ಸಿಎಂ ಸಿದ್ದರಾಮಯ್ಯ ಧ್ವನಿಗೂಡಿಸಿದ್ದಾರೆ. ಎಲ್ಲಿ

ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ, ಕಳೆದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರ ತೆಗೆಯಲಾಗಿತ್ತು ಮತ್ತು ಹೊಸ ಹೆಸರು ಸೇರ್ಪಡೆಗೊಂಡಿತ್ತು ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಗ್ಗೆ ಪ್ರಸ್ತಾವಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕು ಚುನಾವಣೆಯಿಂದ ಬಿಜೆಪಿಯ ಪಿಸಿ ಮೋಹನ್ ಜಯಗಳಿಸುತ್ತಾ ಬರುತ್ತಿದ್ದಾರೆ. ಕಳೆದ ಅಂದರೆ 2024ರ ಲೋಕಸಭಾ ಚುನಾವಣೆಯಲ್ಲಿ ಪಿಸಿ ಮೋಹನ್, ಕಾಂಗ್ರೆಸ್ಸಿನ ಮನ್ಸೂರ್ ಆಲಿ ಖಾನ್ ಅವರನ್ನು 32,707 ಮತಗಳ ಅಂತರದಿಂದ ಸೋಲಿಸಿದ್ದರು.

ಇದನ್ನೂ ಓದಿ : ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ., ” ಕರ್ನಾಟಕದಲ್ಲಿ ಮತಗಳವು ಆಗಿದೆ ಎಂಬ ರಾಹುಲ್ ಗಾಂಧಿಯವರು ಪ್ರತಿಪಾದಿಸುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿತ್ತು ಮತ್ತು ಚುನಾವಣಾ ಕ್ಷೇತ್ರಕ್ಕೆ ಸಂಬಂಧಪಡದ ಹೊಸ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ರೀತಿ ಇಡೀ ದೇಶದಲ್ಲಿ ನಡೆದಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಈ ಗಂಭೀರ ವಿಚಾರವನ್ನು ಸದನದ ಒಳಗೆ ಹಾಗೂ ಹೊರಗೆ ಪ್ರಸ್ತಾಪಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಎಲ್ಲ ಕ್ಷೇತ್ರದಲ್ಲಿ ಮತಎಣಿಕೆಯಲ್ಲಿ ಕಾಂಗ್ರೆಸ್ ಮುಂದಿದ್ದರೂ, ಮಹದೇವಪುರ ಕ್ಷೇತ್ರದಿಂದಾಗಿ ಕಾಂಗ್ರೆಸ್ ಸೋಲುವಂತಾಯಿತು. ಈ ರೀತಿ ಆಗಿರುವುದನ್ನು ಪ್ರಶ್ನಿಸಿದ ರಾಹುಲ್ ಗಾಂಧಿಯವರು, ಈ ಬಗ್ಗೆ ಸಾಕ್ಷ್ಯಾಧಾರಗಳು ಇವೆ ಎಂದು ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ನೋಡಿ : ಧರ್ಮಸ್ಥಳದಲ್ಲಿನ ಕೊಲೆ ಅತ್ಯಾಚಾರಗ ಹಿಂದೆ ಇರುವವರು ಯಾರು? ಸತ್ಯ ಹೊರ ಬರಲಿ…

 

 

Donate Janashakthi Media

Leave a Reply

Your email address will not be published. Required fields are marked *