ಜುಲೈ-31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಮಳೆ ಉತ್ತಮವಾಗಿ ಸುರಿಯುತ್ತಿದೆ. ಹಲವು ಕಡೆ ಪ್ರಕೃತಿ ವಿಕೋಪಗಳು ವರದಿಯಾಗಿವೆ. ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಕಾರ್ಗಿಲ್ ವಿಜಯ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಳೆ ಪ್ರವಾಹ ಪರಿಸ್ಥಿತಿ ಇನ್ನೂ ಕೈಮೀರಿ ಹೋಗಿಲ್ಲ, ಜಲಾಶಯಗಳಿಗೆ ನೀರು ತುಂಬುತ್ತಿರುವುದು ಸಂತೋಷದ ವಿಚಾರ. ರೈತರಿಗೆ ಮತ್ತು ಸರ್ಕಾರಕ್ಕೆ ಇದು ಖುಷಿಯ ಸಂಗತಿ.

ಇದನ್ನೂ ಓದಿ:ಆರ್ಥಿಕ ಹೊರೆ ನಿಭಾಯಿಸಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತ : ಸಿಎಂ ಸಿದ್ದರಾಮಯ್ಯ

ಬರುವ ಸೋಮವಾರ ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುವೆ. ಅಲ್ಲಿನ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ಸಭೆ ನಡೆಸಿ ಆಗಿರುವ ಹಾನಿಗಳು, ಸಂಕಷ್ಟದ ಬಗ್ಗೆ ವಿವರ ಕೇಳುತ್ತೇನೆ. ಈಗ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಿಲ್ಲ.  ರಾಜ್ಯದ ಹಲವೆಡೆ ಮಳೆಯಾಗಿ ಡ್ಯಾಂಗಳು ತುಂಬಿ ಹರಿಯುತ್ತಿವೆ. ಆಲಮಟ್ಟಿ, ಕೆಆರ್​ಎಸ್​, ಕಬಿನಿ, ಹಾರಂಗಿ ಡ್ಯಾಂಗಳಿಗೆ ನೀರು ಬಂದಿದೆ. ರಾಜ್ಯದಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದೆ ಎಂದರು.

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಅಪಾಯ ಪೀಡಿತ ಪ್ರದೇಶಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧವಾಗಿದೆ. ಜನರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

 

Donate Janashakthi Media

Leave a Reply

Your email address will not be published. Required fields are marked *