ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಮೇ 29 ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದೂ, ಹರಿಪ್ರಸಾದ್ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಇದೇ ವೇಳೆ ಈ ವೇಳೆ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿದ್ದರು.
ಇದನ್ನೂ ಓದಿ: ಭಾಷಾವಾರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಇಲ್ಲ: ಡಾ.ಪುರುಷೋತ್ತಮ ಬಿಳಿಮಲೆ
ಬಿ.ಕೆ.ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಬ್ರೇಕ್ ಫಾಸ್ಟ್ ಸವಿದು, ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಹಾಗೂ ಕಾಂಗ್ರೆಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದೆ.
ಇದನ್ನೂ ನೋಡಿ: ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ Janashakthi Media