ಪ್ರಜ್ವಲ್ ರೇವಣ್ಣ ಪಾಸ್‌ಪೊರ್ಟ್ ಮುಟ್ಟುಗೋಲಿಗೆ ಪಿಎಂ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣ ಪಾಸ್‌ಪೊರ್ಟ್ ಮುಟ್ಟುಗೋಲಿಗೆ ಆಗ್ರಹಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪಾಸ್‌ಪೊರ್ಟ್ ಮುಟ್ಟುಗೋಲಿಗೆ ಪಿಎಂ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಪತ್ರದಲ್ಲಿ ಪ್ರಜ್ವಲ್ ರೇವಣ್ಣ ಏ. 27ರಂದು ದೇಶ ಬಿಟ್ಟು ವಿದೇಶಕ್ಕೆ ಪ್ರಯಾಣಿಸಿದ್ದಾರೆ. ಪ್ರಜ್ವಲ್ ರೇವಣ್ಣ ಮೇಲಿನ ಆರೋಪಗಳ ತನಿಖೆಗೆ ಎಸ್‌ಐಟಿ ಹಗಲಿರುಳು ಶ್ರಮಿಸುತ್ತಿರುವಾಗ, ಅವರನ್ನು ದೇಶಕ್ಕೆ ಮರಳಿ ಪಡೆಯುವುದು ಅತ್ಯಂತ ಮಹತ್ವದ್ದಾಗಿದೆ.

ಇದನ್ನು ಓದಿ : ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ: ಬಿಜೆಪಿ ಯೂಟರ್ನ್‌

ಹೀಗಾಗಿ ಪ್ರಜ್ವಲ್ ಪಾಸ್‌ಪೋರ್ಟ್ ಮುಟ್ಟುಗೋಲಿಗೆ ಆಗ್ರಹಿಸಿದ್ದು, ತಕ್ಷಣ ಪ್ರಜ್ವಲ್ ಅವರನ್ನು ವಿದೇಶದಿಂದ ಕರೆಸಲು ಒತ್ತಾಯಿಸಿದ್ದಾರೆ.

ತನಿಖಾ ಸಂಸ್ಥೆಗಳಿಗೆ ರಾಜ್ಯದಿಂದ ಅಗತ್ಯ ಮಾಹಿತಿ ವಿದೇಶಾಂಗ ಇಲಾಖೆ, ಗೃಹಖಾತೆ ಮೂಲಕ ಕ್ರಮ ಕೈಗೊಳ್ಳಬೇಕು. ಜೊತೆಗೆ ಇಂಟರ್‌ಪೋಲ್ ನೆರವು ಪಡೆಯಲು ಸಿಎಂ ಸಲಹೆ ನೀಡಿದ್ದಾರೆ. ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಲು ಅಂತರರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳಿಗೆ ರಾಜ್ಯ CIT ಎಲ್ಲಾ ಅಗತ್ಯ ವಿವರಗಳನ್ನು ಒದಗಿಸುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಹೇಳಿದ್ದಾರೆ.

ಇದನ್ನು ನೋಡಿ : ಪೆನ್‌ಡ್ರೈವ್‌ ಪ್ರಕರಣ : ಬಿಜೆಪಿ ಮೌನಕ್ಕೆ ಕಾರಣವೇನು?ಸಂಧ್ಯಾ ಸೊರಬ ವಿಶ್ಲೇಷಣೆಯಲ್ಲಿ

Donate Janashakthi Media

Leave a Reply

Your email address will not be published. Required fields are marked *