ಬ್ಯಾಂಕ್ ದರೋಡೆ ಪ್ರಕರಣ: ಶೀಘ್ರ ಆರೋಪಿಗಳ ಪತ್ತೆಗೆ ಸಿಎಂ ಖಡಕ್ ಸೂಚನೆ

Please follow and like us:
ಮಂಗಳೂರು: ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆ, ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶೀಘ್ರವಾಗಿ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ.

ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಭೆಯನ್ನು ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

ಇದನ್ನು ಓದಿ: ಕರ್ನಾಟಕದಲ್ಲಿ ಕನ್ನಡ‌‌ ಮಾತನಾಡುವವರ ಬಗ್ಗೆ ಸರಿಯಾದ ಅಂಕಿಅಂಶವಿಲ್ಲ

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದನ್ನೂ ನೋಡಿ: ಕಲಬುರಗಿ | ಬಹುತ್ವ ಸಂಸ್ಕತಿ ಭಾರತೋತ್ಸವ-2025 Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *