ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲಾಗಿದ್ದ ಆದೇಶವನ್ನು ತೀವ್ರ ಒತ್ತಡದಿಂದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಪಸ್ಸು ಪಡೆದಿದ್ದಾರೆ. ಆದೇಶ ಹಿಂಪಡೆಯದಿದ್ದರೆ ಎಲ್ಲಾ ಸರ್ಕಾರಿ ಹಾಗೂ ಮುಖ್ಯಮಂತ್ರಿಗಳ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಮಾಧ್ಯಮ ಪ್ರತಿನಿಧಿಗಳು ತೀರ್ಮಾನಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ವಿಧಿಸಲಾಗಿದ್ದ ನಿರ್ಬಂಧದ ಆದೇಶವನ್ನು ಹಿಂಪಡೆಯಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳು ಆದೇಶವನ್ನು ಹಿಂಪಡೆಯುವ ಬಗ್ಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಲು ಪೊಲೀಸರಿಗೂಸೂಚನೆ ನೀಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಇದನ್ನು ಓದಿ: ಜುಲೈ 26ಕ್ಕೆ ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ..? ಮುಂದಿನ ಸಿಎಂ ಯಾರು…??
ಇಂದು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪೊಲೀಸರಿಂದ ಅಡ್ಡಿವುಂಟಾಗಿತ್ತು. ಮುಖ್ಯಮಂತ್ರಿಗಳು ಸಭೆ ನಡೆಸುವ ಜಾಗದಲ್ಲಿಯೂ ಸಹ ಪೊಲೀಸರಿಂದ ಅಡ್ಡಿಯಾಗಿದ್ದವು. ಮಾಧ್ಯಮದವರನ್ನು ಮಾಧ್ಯಮ ಸಭಾಂಗಣಕ್ಕೆ ತಳ್ಳರುವ ಘಟನೆಯೂ ನಡೆದಿದೆ. ಬಲವಂತವಾಗಿ ಮಾಧ್ಯಮದವರನ್ನು ತಳ್ಳಿದ್ದರು ಎಂಬ ಆರೋಪಗಳಿವೆ.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ನಿರ್ಬಂಧಿಸಿ ಕಳೆದ ವಾರ ಆದೇಶ ಹೊರಡಿಸಲಾಗಿತ್ತು. ಕಾರಿಡಾರ್ಗಳಲ್ಲಿ ಆವರಣದಲ್ಲಿಯೂ ಮಾಧ್ಯಮದವರು ಓಡಾಡದಂತೆ ನಿರ್ಬಂಧ ಹೇರಲಾಗಿತ್ತು. ಸರಕಾರದ ಹೊಸ ಆದೇಶದ ಅನುಮೋದನೆಯ ಮೇರೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು.
ಸುಗಮ ಚಲನೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಯವರು ಮತ್ತು ಇತರ ಸಚಿವರಿಂದ ಹೇಳಿಕೆ ಪಡೆಯಲು ವಿಧಾನಸೌಧದ ಕೆಂಗಲ್ ದ್ವಾರದ ಬಳಿ ಮಾತ್ರ ನಿರ್ದಿಷ್ಟ ಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಅವಕಾಶ ನೀಡಲಾಗಿತ್ತು.
ಈಗಾಗಲೇ, ವಿಧಾನಸಭೆ ಕಲಾಪದ ವೇಳೆ ಸದನದೊಳಗೆ ಛಾಯಾಗ್ರಾಹಕರು ಮತ್ತು ವಿಡಿಯೊ ಚಿತ್ರೀಕರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ನಂತರ ಹೊಸ ಆದೇಶದ ಮೂಲಕ ಆವರಣದಲ್ಲಿಯೂ ನಿರ್ಬಂಧವನ್ನು ವಿಧಿಸುವ ಆದೇಶವನ್ನು ಸರಕಾರ ಹೊರಡಿಸಿದೆ. ಈ ಆದೇಶ ಈಗ ಹಿಂಪಡೆದುಕೊಂಡಿದೆ.