ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಈಗಾಗಲೇ ರಜೆ ಘೋಷಿಸಿದ್ದಾರೆ.
ಇದನ್ನೂ ಓದಿ:ರಾಜ್ಯದ ಹಲವಡೆ ನೀರಿನ ಅಭಾವ : ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ
ಮಳೆಯಿಂದಾಗಿರುವ ಅನಾಹುತಗಳನ್ನು ಗಮನಿಸಿದ ಸಿಎಂ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವಂತೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಗಳು ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ @siddaramaiah ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ…
— CM of Karnataka (@CMofKarnataka) July 6, 2023
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚಿಸಿದ್ದು, ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.