ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಕೊರೋನಾ ಎರಡನೇ ಅಲೆಯಲ್ಲಿ ಸೋಂಕಿನಿಂದ ಸಾವು ನೋವು ಹೆಚ್ಚುತ್ತಿರುವ ಹಿನ್ನೆಲೆ ಲಾಕ್ ಡೌನ್ ಅನ್ನು ಮತ್ತೆ 14 ದಿನ ವಿಸ್ತರಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅದರಂತೆ ಮೇ 24ರಿಂದ ಜೂನ್ 7ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಸಧ್ಯ ಜಾರಿಯಲ್ಲಿರುವ ಮಾರ್ಗಸೂಚಿಯೇ ಮುಂದುವರಿಯಲಿದ್ದು ಬೆಳಿಗ್ಗೆ 6ರಿಂದ 10 ಗಂಟೆಯ ವರೆಗೆ ಜನರಿಗೆ ಅಗತ್ಯ ವಸ್ತು ಖರೀದಿಗೆ ಅವಕಾಶವಿರಲಿದೆ. ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಕೊರೋನಾ ನಿಯಮಗಳನ್ನು ಕಟ್ಟುನಿಟ್ತಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವಿಪತ್ತು ನಿರ್ವಹಣಾ ಸಮಿತಿ ಶಿಫಾರಸ್ಸಿನಂತೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ ಯಡಿಯೂರಪ್ಪ, ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬಗ್ಗೆ ಸಭೆಯಲ್ಲಿ ಆತಂಕ ವ್ಯಕ್ತವಾಗಿದೆ ಎಂದು ತಿಳಿಸಿದರು. ಲಾಕ್‌ಡೌನ್ ತೆರವು ಮಾಡಿದ್ರೆ ನಗರದಲ್ಲಿ ಸೋಂಕು ಹೆಚ್ಚಳವಾಗುವ ಆತಂಕ ವ್ಯಕ್ತಪಡಿಸಿದ ಬಿಎಸ್‌ವೈ, ಹಳ್ಳಿಗಳಲ್ಲಿ ಸೋಂಕು ಕಡಿಮೆಯಾಗುವವರೆಗೂ ಲಾಕ್‌ಡೌನ್ ಮುಂದುವರೆಯಲಿದೆ ಎಂದು ತಿಳಿಸಿದರು.