- ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನ; ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಸ್ವಸ್ಥರಾಗಿದ್ದ ಸಂತೋಷ್ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥರಾಗಿದ್ದ ಸಂತೋಷ್ ಅವರನ್ನು ಸಿಎಂ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಸಂತೋಷ್ ಕುಟುಂಬದವರ ಜೊತೆ ಈ ಸಂಬಂಧ ಚರ್ಚಿಸೋದಾಗಿ ತಿಳಿಸಿದ್ದಾರೆ.
ಸದ್ಯ ಸಂತೋಷ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಅವರಿಗೆ ಎಂ. ಎಸ್. ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ದಾಖಲಿಸಿದ ವೇಳೆ ಸಂತೋಷ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ.
ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂತೋಷ್‍ಗೆ ಅದೇ ಕಾರಣಕ್ಕಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಕೊಡಲಾಗಿತ್ತು.