ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನೀಡಿದ ಆಹಾರದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಪ್ರಯಾಣಿಕರೊಬ್ಬರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಪ್ರಯಾಣಿಕರೊಬ್ಬರು ಭೋಪಾಲ್‌ನಿಂದ ಗ್ವಾಲಿಯರ್‌ಗೆ ಪ್ರಯಾಣಿಸುವಾಗ ಸಿಬ್ಬಂದಿ ನೀಡಿದ ಪರೋಟದಲ್ಲಿ ಜಿರಳೆ ಪತ್ತೆಯಾಗಿತ್ತು. ಈ ಬಗ್ಗೆ ಪ್ರಯಾಣಿಕರೊಬ್ಬರು ಜಿರಳೆ ಇದ್ದ ಪರೋಟ ಪೋಟೊಗಳನ್ನು ಟ್ವೀಟ್ ಮಾಡಿದ್ದರು.
@IRCTCofficial found a cockroach in my food, in the vande bharat train. #Vandebharatexpress#VandeBharat #rkmp #Delhi @drmbct pic.twitter.com/Re9BkREHTl
— pundook🔫🔫 (@subodhpahalajan) July 24, 2023
ಇದನ್ನೂ ಓದಿ:ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಹುಳು ಪತ್ತೆಯಾಗಿರುವ ಕುರಿತು ಪುಂಡೂಕ್ ಎಂಬ ಟ್ವಿಟ್ಟರ್ ಖಾತೆಯಿಂದ ಫೋಟೊವನ್ನು ಹಂಚಿಕೊಳ್ಳಲಾಗಿದೆ. ಐಆರ್ಸಿಟಿಸಿಯನ್ನು ಟ್ಯಾಗ್ ಮಾಡಲಾಗಿದೆ. ಪ್ರಯಾಣಿಕರಿಗೆ ಆದ ತೊಂದರೆ ಬಗ್ಗೆ ಐಆರ್ಸಿಟಿಸಿ ಕ್ಷಮೆ ಯಾಚಿಸಿದೆ. ಈ ಕೆಟ್ಟ ಅನುಭವದಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಪರ್ಯಾಯ ಆಹಾರ ವ್ಯವಸ್ಥೆ ಮಾಡಲಾಗಿತ್ತು. ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದ ಎಂದು ಭೋಪಾಲ್‌ನ ವಿಭಾಗೀಯ ರೈಲ್ವೆ ಮಾನ್ಯೇಜರ್ ತಿಳಿಸಿದ್ದಾರೆ.