‘ಕಾಕ್ರೋಚ್ ಜನತಾ ಪಾರ್ಟಿ’ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ: ಪೊಲೀಸರ ಸ್ವತಂತ್ರ ತೀರ್ಮಾನ ಎಂದ ಪರಮೇಶ್ವರ್‌

ಬೆಂಗಳೂರು: ‘ಕಾಕ್ರೋಚ್ ಜನತಾ ಪಾರ್ಟಿ’ ಸಂಘಟನೆಯ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿರುವುದು ಪೊಲೀಸರ ಸ್ವತಂತ್ರ ತೀರ್ಮಾನವಾಗಿದ್ದು, ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಕಾಕ್ರೋಚ್

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಮತ್ತು ಸುವ್ಯವಸ್ಥೆಯ ಅಂಶಗಳನ್ನು ಪರಿಗಣಿಸಿ ಪೊಲೀಸರು ತೀರ್ಮಾನ ಕೈಗೊಂಡಿದ್ದಾರೆ. ಸರ್ಕಾರ ಯಾರ ಕಾರ್ಯಕ್ರಮಕ್ಕೂ ರಾಜಕೀಯ ಕಾರಣಕ್ಕಾಗಿ ತಡೆಹಿಡಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

‘ಕಾಕ್ರೋಚ್ ಜನತಾ ಪಾರ್ಟಿ’ ಸಂಘಟನೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಲು ಮುಂದಾಗಿತ್ತು. ಆದರೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪೊಲೀಸರು ತಿರಸ್ಕರಿಸಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ : ಮೇ 25 | ಫ್ರೀಡಂ ಪಾರ್ಕ್‌ನಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರ

ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮತ್ತು ರಾಜಕೀಯ ಟೀಕೆಗಳ ಮೂಲಕ ಗಮನ ಸೆಳೆದಿರುವ ಈ ಸಂಘಟನೆಯ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿರುವುದು ಚರ್ಚೆಗೆ ಕಾರಣವಾಗಿತ್ತು. ಕೆಲವು ಸಂಘಟನೆಗಳು ಇದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ನಿರ್ಬಂಧ ಎಂದು ಟೀಕಿಸಿವೆ.

ಇದೇ ವೇಳೆ, “ಪೊಲೀಸರು ಪರಿಸ್ಥಿತಿಯನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರ ನೇರವಾಗಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ನೋಡಿ : ಧರ್ಮದ ಮುಸುಕಿನಲ್ಲಿ ಅಧರ್ಮ – ನಟ ಕಿಶೋರ್ ಜೊತೆ ಬಾತ್ ಚೀತ್ Janashakthi Media

Donate Janashakthi Media

Leave a Reply

Your email address will not be published. Required fields are marked *