ಜನರಿಂದ ಹಣ ವಸೂಲಿ‌ ಆರೋಪ: ಎಎಸ್ಐ ಸೇರಿ ಇಬ್ಬರು ಹೊಯ್ಸಳ‌ ಸಿಬ್ಬಂದಿ ಅಮಾನತು

ಬೆಂಗಳೂರು: ಹೊಯ್ಸಳ ಪೊಲೀಸ್ ವಾಹನದಲ್ಲಿ ಹಣ ವಸೂಲಿ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಸಂಬಂಧ ಇಬ್ಬರು ಪೊಲೀಸ್‌ ಸಿಬ್ಬಂದಿ ಸಸ್ಪೆಂಡ್ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜಗೋಪಾಲನಗರ ಠಾಣೆಯ ಎಸ್‌ಎಸ್‌ಐ ರಾಮಲಿಂಗಯ್ಯ, ಹೆಡ್‌ಕಾನ್ಸ್‌ ಟೇಬಲ್ ಪ್ರಸನ್ನಕುಮಾ‌ರ್ ಎಂಬುವವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಮಲಿಂಗಯ್ಯ ಮತ್ತು ಪ್ರಸನ್ನ ಕುಮಾರ್ ಅವರು ಹೊಯ್ಸಳ ವಾಹನದಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡಿದ್ದನ್ನು ವಿಡೀಯೋ ಮಾಡಿದ್ದು ಬಳಿಕ ಪೊಲೀಸ್ ಕಳ್ಳ ಎಂದು ಅಟ್ಟಿಸಿಕೊಂಡು ಹೋಗಿದ್ದರು.

ಇದನ್ನೂ ಓದಿ: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ಮೊಬೈಲ್​ನಲ್ಲಿ ಸೆರೆಹಿಡಿದಿದ್ದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಲಾಗಿತ್ತು. ಬಳಿಕ ಪೊಲೀಸ್ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ಪೊಲೀಸ್‌ ಇಲಾಖೆಗೆ ಬಹಳ ಮುಜುಗರ ತಂದಿತ್ತು. ಹೀಗಾಗಿ ಪೊಲೀಸ್ ಕಮಿಷನ‌ರ್ ತನಿಖೆಗೆ ಆದೇಶ ನೀಡಿದ್ದರು. ಈಗ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ನೋಡಿ: ಪ್ರಜ್ವಲ್ ಲೈಂಗಿಕ ಹತ್ಯಾಕಾಂಡ : ವಿಶೇಷ ನ್ಯಾಯಾಲಯ ಸ್ಥಾಪನೆ ಅಗತ್ಯ – ಹೈಕೋರ್ಟ್ ವಕೀಲ Janashakthi Media

Donate Janashakthi Media

Leave a Reply

Your email address will not be published. Required fields are marked *