ಹಿಜಾಬ್‌ಗೆ ಅವಕಾಶ ನೀಡಿ – ಜಿಲ್ಲಾಧಿಕಾರಿಗೆ ವಿದ್ಯಾರ್ಥಿನಿಯರ ಮನವಿ

ಮಂಗಳೂರು: ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್‌ ವಿವಾದ ಈಗ ಮತ್ತೆ ಸುದ್ದಿಯಲ್ಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಂಪನಕಟ್ಟೆಯಲ್ಲಿರುವ ಮಂಗಳುರು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ 14 ವಿದ್ಯಾರ್ಥಿನಿಯರು ಇಂದು(ಮೇ 30) ಸಹ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿರುವ ಘಟನೆ ನಡೆದಿದೆ.

ಹಿಜಾಬ್‌ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ಮೇ 26ಕ್ಕೆ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿತು. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ಡಾ.ಅನುಸೂಯ ರೈ ವಿಷಯವನ್ನು ತಿಳಿಸಿ, ಸುಖಾಂತಗೊಳಿಸಿದ್ದರು. ಆದರೂ ಸಹ 14 ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ: ಮತ ನೀಡಲು ಹಿಜಾಬ್‌ ಧರಿಸಿ ಬಂದ ಮಹಿಳೆಯರಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ!

ಶನಿವಾರದಂದು ಸಹ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಕ್ಕಾಗಿ ತರಗತಿಗೆ ಹೋಗದಂತೆ ತಡೆಯಲಾಗಿತ್ತು. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದ್ದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ತಡೆದಿದ್ದರು. ಆದರೆ, ವಿದ್ಯಾರ್ಥಿನಿಯರು ಅನಿವಾರ್ಯವಾಗಿ ಕಾಲೇಜು ಆವರಣದಲ್ಲೇ ಸಂಜೆಯವರೆಗೂ ಕುಳಿತು ನಂತರ ಮನೆಗೆ ತೆರಳಿದ್ದರು ಎಂಬ ಮಾಹಿತಿ ಇದೆ.

ಸದ್ಯ ಇಂದು ವಿದ್ಯಾರ್ಥಿನೀಯರು ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ತೆರಳಲು ಅನುಮತಿ ನೀಡುವಂತೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಕಛೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಭೇಟಿಗಾಗಿ ವಿದ್ಯಾರ್ಥಿನೀಯರು ಕಾಯುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *