ಮೈಸೂರು| ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಢಿಕ್ಕಿ; 35 ಮಂದಿಗೆ ಗಾಯ

ಮೈಸೂರು: ಮೇ 20 ಮಂಗಳವಾರದಂದು ನಂಜನಗೂಡಿನ ಗೋಳೂರು ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಮುಖಾ-ಮುಖಿ ಢಿಕ್ಕಿಯಾದ ಪರಿಣಾಮ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ನಂಜನಗೂಡು-ಚಾಮರಾಜನಗರ ರಸ್ತೆಯ ಗೋಳೂರು ಗ್ರಾಮದ ಬಳಿಯ ವಿದ್ಯಾಪೀಠದ ಮುಂಭಾಗ ಎರಡು ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ. ಮೈಸೂರು

ಅಪಘಾತದಲ್ಲಿ ಎರಡು ಬಸ್ ನ ಚಾಲಕರು ಸೇರಿದಂತೆ 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ಗಾಯಾಳುಗಳನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮಳೆ: ತಗ್ಗು ಪ್ರದೇಶ ಸಂಪೂರ್ಣ ಜಲಾವೃತ

12 ಜನರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಮತ್ತು ಚಾಮರಾಜನಗರದಿಂದ ನಂಜನಗೂಡು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗಳ ನಡುವೆ ಢಿಕ್ಕಿ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆ ನಂಜನಗೂಡು ಸಂಚಾರಿ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ: ದೇಶದ ಜನರಿಗೆ ತಣ್ಣೀರು ಎರಚುತ್ತಿರುವ ಮೋದಿ Janashakthi Media

Donate Janashakthi Media

Leave a Reply

Your email address will not be published. Required fields are marked *