ಬೊಗೋಟಾ : ಮಧ್ಯ ಕೊಲಂಬಿಯಾದ ಕುಂಡಿನಮಾರ್ಕಾದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿ ,10 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಸಿಕ್ಕಿಬಿದ್ದ ಗಣಿ ಕಾರ್ಮಿಕರನ್ನು ತಲುಪಲು ರಕ್ಷಣ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.
Una lamentable tragedia lo sucedido en la mina de Sutatausa, donde fallecieron 11 personas. Estamos haciendo todos los esfuerzos con la gobernación de Cundinamarca para rescatar con vida a las personas atrapadas. Un abrazo de solidaridad a las víctimas y a sus familiares.
— Gustavo Petro (@petrogustavo) March 15, 2023
ಮೀಥೇನ್ ಅನಿಲದ ಶೇಖರಣೆ ಮಾಡಿದ್ದ ಘಟಕ ಸ್ಪೋಟಗೊಂಡು ಈ ದುರಂತ ಸಂಭವಿಸಿದೆ. ಸುರಂಗಗಳಿಂದ ಪರಸ್ಪರ ಸಂಪರ್ಕ ಹೊಂದಿರುವ ಗಣಿಯಲ್ಲಿ ಸರಣಿ ಸ್ಫೋಟ ಉಂಟಾಗಿದ್ದು ಭಾರಿ ವಿನಾಶ ಸೃಷ್ಠಿಸಿದೆ ಎಂದು ಹೇಳಲಾಗುತ್ತಿದೆ.
ಕೊಲಂಬಿಯಾದ ಕಲ್ಲಿದ್ದಲು ಗಣಿಗಳಲ್ಲಿ ಸ್ಪೋಟಗಳು ಮತ್ತು ಭೂಕುಸಿತಗಳು ಸಾಮಾನ್ಯವಾಗಿದ್ದು ಕಳೆದ ರಾತ್ರಿ ಸಂಭವಿಸಿರುವ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಬಹುದು ಎಂದು ಹೇಳಲಾಗಿದೆ.