ಸುಳ್ಳುಗಳನ್ನೇ ಸತ್ಯ ಮಾಡುವ ಹಿಟ್ಲರ್ ಮನಸ್ಥಿತಿಯ ರಾಜಕಾರಣಿಗಳು ಹೆಚ್ಚಾಗಿದ್ದಾರೆ – ಸಿಎಂ ಸಿದ್ಧರಾಮಯ್ಯ

ಬೆಂಗಳೂರು :ಈಗ ಸುಳ್ಳುಗಳನ್ನೇ ಸತ್ಯ ಮಾಡುವ ಹಿಟ್ಲರ್ ಮನಸ್ಥಿತಿಯ ರಾಜಕಾರಣಿಗಳು ಹೆಚ್ಚಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಮಾಜಿ ಶಾಸಕ, ಕಾರ್ಮಿಕ ನಾಯಕ ಸೂರ್ಯನಾರಾಣರಾವ್ (ಕಾಮ್ರೇಡ್ ಸೂರಿ) ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ‘ಕರ್ನಾಟಕದ ಅಭಿವೃದ್ಧಿಯಲ್ಲಿ ಕಾರ್ಮಿಕ ಚಳವಳಿಯ ಪಾತ್ರ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದರು.

ಸೂರ್ಯನಾರಾಯಣ್ ಸದನದ ಒಳಗೆ ಮಾತ್ರವಲ್ಲ ಹೊರಗೂ ಹೋರಾಟಗಾರರಾಗಿದ್ದರು. ಶ್ರಮಿಕರ ಧ್ವನಿಯಾಗಿ ಸೂರ್ಯನಾರಾಯಣ್ ರಾವ್ ಅವರು ಹೋರಾಟ ನಡೆಸುತ್ತಿದ್ದರು. ಯಾವುದೇ ವಿಚಾರವಾದರೂ ಸರಿ ಸಂಪೂರ್ಣ ಸಿದ್ಧತೆ ಮಾಡಿಕೊಂಡು ಬರುತ್ತಿದ್ದರು. ಹೀಗಾಗಿ ಅವರ ಮಾತು ಮತ್ತು ಭಾಷಣ ಕೇಳಲು ನಾವು ಕಾತರರಾಗಿರುತ್ತಿದ್ದೆವು ಎಂದು ಸೂರಿಯವರೊಟ್ಟಗಿನ ನೆನಪನ್ನು ಮೆಲುಕು ಹಾಕಿದರು.

ದಣಿವರಿಯದ ಹೋರಾಟಗಾರರಾಗಿದ್ದ ಕಾಮ್ರೇಡ್ ಸೂರಿ ಸದಾ ಸತ್ಯದ ಮೂಲಕ ಸರ್ಕಾರಕ್ಕೆ ಎಚ್ಚರಿಸುತ್ತಿದ್ದರು. ಸದನದ ಒಳಗಾಗಲಿ, ಹೊರಗಾಗಲಿ ಶಾಂತಿ ಕದಡುವ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿರಲಿಲ್ಲ. ನಮ್ಮ ಸರ್ಕಾರ ದುಡಿಯುವ ವರ್ಗದ ಏಳಿಗೆಗಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ. ನಮ್ಮ ಸರ್ಕಾರ ಸದಾ ನಿಮ್ಮ ಪರವಾಗಿ, ಕಾರ್ಮಿಕರ ಪರವಾಗಿ ಇರುತ್ತದೆ. ನಾವು ಕಾರ್ಮಿಕರ ಪರವಾಗಿ ಕಾರ್ಯಕ್ರಮ ರೂಪಿಸಿದ್ದನ್ನು, ಗ್ಯಾರಂಟಿಗಳನ್ನು ನೀಡಿದ್ದನ್ನು ಬಿಜೆಪಿ-ಆರ್ ಎಸ್ ಎಸ್ ನಂತಹ ಬಲಪಂಥೀಯ ಸಂಘಟನೆಗಳು ವಿರೋಧಿಸುತ್ತಿವೆ.

ನಮ್ಮ ಸರ್ಕಾರ ದುಡಿಯುವ ವರ್ಗದ ಏಳಿಗೆಗಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ. ನಮ್ಮ ಸರ್ಕಾರ ಸದಾ ನಿಮ್ಮ ಪರವಾಗಿ, ಕಾರ್ಮಿಕರ ಪರವಾಗಿ ಇರುತ್ತದೆ. ನಾವು ಕಾರ್ಮಿಕರ ಪರವಾಗಿ ಕಾರ್ಯಕ್ರಮ ರೂಪಿಸಿದ್ದನ್ನು, ಗ್ಯಾರಂಟಿಗಳನ್ನು ನೀಡಿದ್ದನ್ನು ಬಿಜೆಪಿ-ಆರ್ ಎಸ್ ಎಸ್ ನಂತಹ ಬಲಪಂಥೀಯ ಸಂಘಟನೆಗಳು ವಿರೋಧಿಸುತ್ತಿವೆ. ದುಡಿಯುವ ವರ್ಗದ ಹೋರಾಟದ ಮ್ಯೂಸಿಯಂ ರಚನೆಗೆ ಕ್ರಮ ಕೈಗೊಳ್ಳುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದುಡಿಯುವ ವರ್ಗದ ಹೋರಾಟದ ಮ್ಯೂಸಿಯಂ ಮಾಡುವಂತೆ ಬೇಡಿಕೆ ಇಟ್ಟಿದ್ದೀರಿ, ಸಕಾರಾತ್ಮಕವಾಗಿ ನಮ್ಮ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ JNU ನಿವೃತ್ತ ಪ್ರಾಧ್ಯಾಪಕರಾದ ಜಾನಕಿ ನಾಯರ್, CITUನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ತಪನ್ ಸೆನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿಸುಂದರಂ, ಯು. ಬಸವರಾಜ ಇದ್ದರು. ಹಿರಿಯ ಕಾರ್ಮಿಕ ನಾಯಕ ವಿಜೆಕೆ ನಾಯರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯ ಕಾರ್ಮಿಕರು ಹಾಜರಿದ್ದರು.

 

 

 

Donate Janashakthi Media

Leave a Reply

Your email address will not be published. Required fields are marked *