ಅರ್ಹರಿಗೆ ಸರ್ಕಾರಿ ಸೌಲಭ್ಯ ದೊರಕಿಸಲು ಸಮಿತಿ ರಚನೆ: ಕೆ.ಎಚ್.ಮುನಿಯಪ್ಪ

ಬೆಂಗಳೂರು: ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆಹಚ್ಚಿ ತೆಗದು ಹಾಕಿ ಅರ್ಹರಿಗೆ ಸರ್ಕಾರಿ ಸೌಲಭ್ಯ ದೊರಕಿಸುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚನೆ ಮಾಡುವುದಾಗಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ತಿಳಿಸಿದ್ದಾರೆ. ಅರ್ಹ

ಅಧಿವೇಶನ ಮುಗಿದ ನಂತರ ಮೊದಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ನಂತರ ಗ್ರಾಮ ಮಟ್ಟದಲ್ಲಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪಿಡಿಒ ಸೇರಿದಂತೆ ಮತ್ತಿತರರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಹೇಳಿದರು.

ನಿಜವಾದ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಸಿಗಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಸದನದ ಸದಸ್ಯರೆಲ್ಲರೂ ಸಹಕಾರ ಕೊಟ್ಟರೆ ಬಿಪಿಎಲ್ ಪಡೆದುಕೊಂಡ ಅನರ್ಹ ಫಲಾನುಭವಿಗಳ ಪರಿಷ್ಕರಣೆ ಕಾರ್ಯ ಪ್ರಾರಂಭವಾಗಲಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ಇದನ್ನೂ ಓದಿ: ಕಲಬುರಗಿ| ಮತಕ್ಷೇತ್ರದಿಂದ ಬಿಜೆಪಿ ಶಾಸಕ ಕಾಣೆ : ಪೋಸ್ಟರ್‌ ಅಂಟಿಸಿ ರೈತರ ಆಕ್ರೋಶ

ಈ ಹಿಂದೆ ಪರಿಷ್ಕರಣೆ ಮಾಡಲು ಹೊರಟಾಗ ದೊಡ್ಡ ವಿವಾದವೇ ಉಂಟಾಗಿತ್ತು. 99 ಎಪಿಎಲ್ ಕಾರ್ಡ್‌ ಗಳು ಬಿಪಿಎಲ್ ಸೇರ್ಪಡೆಯಾದರೆ ಯಾರೂ ಕೇಳುವುದಿಲ್ಲ. ಆದರೆ ಒಂದೇ ಒಂದು ಬಪಿಎಲ್ ಕಾರ್ಡ್ ಬಿಟ್ಟು ಹೋದರೆ ದೊಡ್ಡ ವಿವಾದವನ್ನೇ ಸೃಷ್ಟಿ ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿಜವಾದ ಫಲಾನುಭವಿಗಳು ಸರ್ಕಾರಿ ಸವಲತ್ತುಗಳಿಂದ ವಂಚಿತರಾಗಬಾರದೆಂಬುದು ನಮ್ಮ ಉದ್ದೇಶ. ನಾವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಮಾಡಬೇಕು. ಹೀಗಾಗಿ ಪರಿಷ್ಕರಣೆ ಮಾಡಲು ಮುಂದಾಗಿದ್ದೇವೆ ಎಂದು ಸಚಿವರು ಸಮರ್ಥಿಸಿಕೊಂಡರು.

ರಾಜ್ಯದಲ್ಲಿ ಒಟ್ಟು 2,95,000 ಬಿಪಿಎಲ್ ಪಡಿತರ ಫಲಾನುಭವಿಗಳಿದ್ದರು. ಇದರಲ್ಲಿ ಪ್ರಸ್ತುತ 2,40,000 ಫಲಾನುಭವಿಗಳು ಸರ್ಕಾರದ ಸವಲತ್ತು ಪಡೆಯುತ್ತಿದ್ದಾರೆ. ಇದರಲ್ಲಿ ಕೆಲವು ಅನರ್ಹರು ಸೇರ್ಪಡೆಯಾಗಿದ್ದಾರೆ. ಪರಿಷ್ಕರಣೆ ನಂತರ ಎಪಿಎಲ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

ನಮಗೆ ಕೇಂದ್ರ ಸರ್ಕಾರು ಒಂದು ಕೋಟಿ ಹತ್ತು ಲಕ್ಷ ಫಲಾನುಭವಿಗಳನ್ನು ಮಾತ್ರ ಪಟ್ಟಿಗೆ ಸೇರ್ಪಡೆ ಮಾಡಲು ಅವಕಾಶ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು ನಾಲ್ಕು ಕೋಟಿ 50 ಲಕ್ಷ ಫಲಾನುಭವಿಗಳಿಗೆ ಸವಲತ್ತು ನೀಡಲಾಗುತ್ತಿದೆ. ಬಿಪಿಎಲ್ ಪಟ್ಟಿಯಿಂದ 25 ಲಕ್ಷ ಪಡಿತರಚೀಟಿಗಳನ್ನು ತೆಗೆದು ಹಾಕಬೇಕಿದೆ. ಪರಿಷ್ಕರಣೆ ಮಾಡುವ ಸಂದರ್ಭದಲ್ಲಿ ಕೆಲವು ಗೊಂದಲಗಳು ಉಂಟಾಗುವುದು ಸಹಜ. ಆನರ್ಹರನ್ನು ತೆಗೆದು ಹಾಕಿ ಅರ್ಹರಿಗೆ ಸಿಗಬೇಕೆಂಬುದು ನಮ್ಮ ಏಕೈಕ ಗುರಿ. ಇದಕ್ಕೆ ಒತ್ತಡ ಬರುವುದು ಸಹಜ. ಜನಪ್ರತಿನಿಧಿಗಳು ಇದಕ್ಕೆ ಸಹಕಾರ ಕೊಡಬೇಕೆಂದು ಮನವಿ ಮಾಡಿದರು.

ಸರ್ವ ಪಕ್ಷಗಳ ಸದಸ್ಯರು ಸಹಕಾರವಿಲ್ಲದೆ ಇದನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ. ನಮ್ಮ ಮುಖ್ಯಮಂತ್ರಿಯವರು ಯಾವುದೇ ಕಾರಣಕ್ಕೂ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಿ ಎಂದು ಸೂಚನೆ ಕೊಟ್ಟಿದ್ದಾರೆ. ಏಕಕಾಲದಲ್ಲಿ ಈ ಪ್ರಕ್ರಿಯೆ ನಡೆಯುವುದರಿಂದ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತವೆ. ಸರ್ವರ್, ಕಂಪ್ಯೂಟರ್ ಸೇರಿದಂತೆ ಹಲವು ತಾಂತ್ರಿಕ ಕಾರಣಗಳು ಎದುರಾಗುತ್ತವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಮನವಿ ಮಾಡಿಕೊಂಡರು.

ಇದಕ್ಕೂ ಮುನ್ನ ಮಾತನಾಡಿದ ಸದಸ್ಯ ಸಿ.ಟಿ.ರವಿ ಮಾತನಾಡಿ, ಬಿಪಿಎಲ್ ಕಾರ್ಡ್ ಪರಿಷ್ಕರಣೆಯಿಂದಾಗಿ ಸಾಕಷ್ಟು ಗೊಂದಲ ಉಂಟಾಗಿದೆ. ನಿಜವಾದ ಫಲಾನುಭವಿಗಳು ನಮ್ಮನು ಸರ್ಕಾರ ಯಾವ ತೆಗೆದುಹಾಕುತ್ತಾರೆಂಬ ಆತಂಕದಿಂದ ಕಾಲ ನೂಕುತ್ತಿದ್ದಾರೆ. ನಿಜವಾದ ಫಲಾನುಭವಿಗಳಿಗೆ ಅನ್ಯಾಯಗವಾಗದಂತೆ ಸರ್ಕಾರ ಕ್ರಮ ವಹಿಸಬೇಕೆಂದು ಹೇಳಿದರು.

ಇದನ್ನೂ ನೋಡಿ: CITU| ಶ್ರಮಿಕರ ಅಹೋರಾತ್ರಿ ಹೋರಾಟ 5ನೇ ದಿನಕ್ಕೆ | ಅಂಗವಾಡಿ ನೌಕರರ ಸಂಘಟನೆಯಿಂದ ಧರಣಿ

Donate Janashakthi Media

Leave a Reply

Your email address will not be published. Required fields are marked *