ಸಾಗರ : ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ವಿರುದ್ದ ಕೋಮು ಪ್ರಚೋದನಾಕಾರಿ ಭಾಷಣ ಆರೋಪದಡಿ ಪ್ರಕರಣ ದಾಖಲಾಗಿದೆ.
ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ವಿರುದ್ಧ ಸಾಗರ ಪೇಟೆ ಪೋಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕ್ಯಾಬಿನೆಟ್ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸಲು ತೀರ್ಮಾನ: ಸಭೆಗೂ ಮುನ್ನವೇ ವರದಿ ಸೋರಿಕೆ!
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ ಸಾಗರ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನಾ ಸಭೆ ನಡೆಸಿತು.
ಅರಣ್ ಕುಗ್ವೆ ಭಾವನೆ ಕೆರಳಿಸುವ, ದ್ವೇಷ ಭಾವನೆ ಮೂಡುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸಾಗರ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಕೆ.ಅಝೀಂ ಇಲ್ಲಿನ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ನೋಡಿ : ನಿವೃತ್ತ ವಿಮಾ ನೌಕರರ ಪ್ರತಿಭಟನೆ : ಪಿಂಚಣಿ ನೌಕರರ ಬಿಕ್ಷೆಯಲ್ಲ, ಹಕ್ಕು Janashakthi Media