ಬೆಂಗಳೂರು : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (KCCDC) ತನ್ನ ಹೊಸ ಸಾಲ, ಸಹಾಯಧನ ಹಾಗೂ ಕಲ್ಯಾಣ ಯೋಜನೆಗಳು ಮತ್ತು ಅಧಿಕೃತ ವೆಬ್ ಪೋರ್ಟಲ್‌ನ ಲೋಕಾರ್ಪಣೆಯನ್ನು 2025ರ ಅಕ್ಟೋಬರ್ 17ರಂದು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಕೆಎಂಡಿಸಿ ಭವನದಲ್ಲಿ ಭವ್ಯವಾಗಿ ನೆರವೇರಿಸಿತು.ಕಾರ್ಯಕ್ರಮವನ್ನು ಮಾನ್ಯ ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಶ್ರೀ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸಿದರು. ಬೆಂಗಳೂರು
ಇದನ್ನೂ ಓದಿ : ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಕಣ್ಣನ್ ಗೋಪಿನಾಥನ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
“ಕರ್ನಾಟಕ ಸರ್ಕಾರವು ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಎಂಬ ಧೈಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮಾನ್ಯ ಮುಖ್ಯಮಂತ್ರಿ ಅವರು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಿ, ವಿಶೇಷ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆ. ಅದೇ ರೀತಿಯಲ್ಲಿ, ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಹಿತಕ್ಕಾಗಿ ಮತ್ತು ಅವರ ಸಂಸ್ಥೆಗಳ ಬಲವರ್ಧನೆಗಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಮುಖ್ಯಮಂತ್ರಿಗಳವರು ನಿಗಮಕ್ಕೆ ನೀಡಿರುವ ₹250 ಕೋಟಿಯ ಅನುದಾನ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಉಪಯೋಗವಾಗಲೆಂದು ನಾನು ಆಶಿಸುತ್ತೇನೆ.” ಬೆಂಗಳೂರು
ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ನಸೀರ್ ಅಹ್ಮದ್ ಅವರು ನಿಗಮದ ಹೊಸ ಯೋಜನೆಗಳು ಕ್ರಿಶ್ಚಿಯನ್ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿ ಎಂದು ಶುಭಾಶಯ ಕೋರಿದರು.
ಪ್ರೊ. ಎಸ್. ಜಾಫೆಟ್, ನಿಗಮದ ಅಧ್ಯಕ್ಷರು, ಈ ನಿಗಮದ ಸ್ಥಾಪನೆಗೆ ಕಾರಣರಾದ ಮಾನ್ಯ ಮುಖ್ಯಮಂತ್ರಿ, ಸಚಿವರು, ಸರ್ಕಾರ ಹಾಗೂ ಕ್ರಿಶ್ಚಿಯನ್ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿ, ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬದ್ಧತೆಯನ್ನು ವ್ಯಕ್ತಪಡಿಸಿದರು. ಈ ನಿಗಮದ ಯೋಜನೆಗಳ ಬಗ್ಗೆ ಕ್ರಿಸ್ತ ಚರ್ಚ್‌ಗಳು, ಸಂಸ್ಥೆಗಳು ಮತ್ತು ಮುಖಂಡರು ಹೆಚ್ಚಿನ ಪ್ರಚಾರ ನೀಡುವುದರ ಮೂಲಕ ಅರ್ಹ ವ್ಯಕ್ತಿಗಳು ಈ ಯೋಜನೆಗಳ ಪ್ರಯೋಜನವನ್ನು ಪಡೆಯಲು ಸಹಕಾರ ನೀಡುವಂತೆ ವಿನಂತಿಸಿದರು.
ಈ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅಂಟೋನಿ ಮರಿಯಾ ಇಮ್ಯಾನ್ಯುಯಲ್, ನಿರ್ದೇಶಕ ಮಂಡಳಿಯ ಸದಸ್ಯರಾದ ಶ್ರೀ ಸಂಜೀವ್ ಕುಮಾರ್ ಜಾಗೀರ್ದಾರ್, ಶ್ರೀ ಪ್ರಶಾಂತ್ ರಾಜ್ ಜತ್ತನ್ನ, ಶ್ರೀ ಹರ್ಷ ಮೆಲ್ವಿನ್ ಲಾಸ್ರಾದೊ, ಶ್ರೀ ಸಂದೀಪ್ ಕೆ.ಸಿ. ಶ್ರೀ ಜೋಸೆಫ್ ಕುಮಾರ್, ಶ್ರೀ ಜಿ.ಜೆ. ರವಿಕುಮಾರ್, ಶ್ರೀ ಜೆ. ಕ್ಷೇವಿಯರ್. ಅಲ್ಪಸಂಖ್ಯಾತ ಆಯೋಗ್ಯದ ಅಧ್ಯಕ್ಷರು, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಮತ್ತು ಅಲ್ಪಸಂಖ್ಯಾತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ನೋಡಿ : ಉತ್ತರ ಕನ್ನಡ | ಎಮರ್ಜೆನ್ಸಿಯಲ್ಲಿ ಜೀವ ಉಳಿಸಿಕೊಳ್ಳಲು ಸುಸಜ್ಜಿತ ಆಸ್ಪತ್ರೆ ಇಲ್ಲ | ಯಮುನಾ ಗಾಂವ್ಕರ್
