ಅನುಕಂಪದ ನೌಕರಿ ನಿರಾಕರಿಸುವಂತಿಲ್ಲ: ಹೈಕೋರ್ಟ್

ಬೆಂಗಳೂರು: ಹುದ್ದೆ ಖಾಲಿ ಇಲ್ಲ ಎಂದು ನೆಪ ಹೇಳಿ ಅನುಕಂಪದ ನೌಕರಿ ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆಗಸ್ಟ್‌ 13ರಂದು ಮಹತ್ವದ ಆದೇಶವನ್ನು ಹೊರಡಿಸಿದೆ.

ನಿರ್ದಿಷ್ಟ ಅನುದಾನಿತ ಕಾಲೇಜಿನಲ್ಲಿ ಉದ್ಯೋಗ ಖಾಲಿಯಿಲ್ಲ ಎಂಬ ಕಾರಣಕ್ಕೆ ಅನುಕಂಪದ ಆಧಾರದ ಮೇಲೆ ನೌಕರಿ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ.

ಇದನ್ನೂ ಓದಿ: ಖಾಲಿ ಇರುವ 2,76,386 ಹುದ್ದೆಗಳನ್ನು ಭರ್ತಿ ಮಾಡುವಂತೆ ವಿದ್ಯಾರ್ಥಿ ಸಂಘ ಪ್ರತಿಭಟನೆ

ಬಾಗಲಕೋಟೆಯ ಅನುದಾನಿತ ಆದರ್ಶ ಪಿಯು ಕಾಲೇಜಿನಲ್ಲಿ ಎಫ್‌ಡಿಎ ನೌಕರನಾಗಿದ್ದ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಆಧಾರ ದಲ್ಲಿ ನೌಕರಿ ನೀಡಲು ಕೋರಿ ಸಂತೋಷ್ ಯಮನಪ್ಪ ವಡಕರ್‌ ಸಲ್ಲಿಸಿದ್ದ ಮನವಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಹುದ್ದೆ ಖಾಲಿಯಿಲ್ಲ ಎಂದು ಹಿಂಬರಹ ನೀಡಿತ್ತು.

ಇದನ್ನು ಪ್ರಶ್ನಿಸಿ ಯಮನಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್ ಪೀಠ, ಹುದ್ದೆ ಖಾಲಿಯಿಲ್ಲ ಮನವಿ ತಿರಸ್ಕರಿಸಲಾಗುವುದಿಲ್ಲ. ಇತರೆ ಅನುದಾನಿತ ಸಂಸ್ಥೆಗಳಲ್ಲಿ ಹಂಚಿಕೆ ಮಾಡಬೇಕು ಎಂದು ಇಲಾಖೆ ಹಿಂಬರಹ ರದ್ದುಪಡಿಸಿ ಆದೇಶ ಹೊರಡಿಸಿದೆ.

ಇದನ್ನೂ ನೋಡಿ: ಧರ್ಮಸ್ಥಳ | ಮಗಳನ್ನು ನೆನೆದು ಕಣ್ಣೀರು ಹಾಕಿದ ತಾಯಿ, ಆ ದಿನ ಏನಾಯ್ತು? ವಿವರವಾಗಿ ಬಿಚ್ಚಿಟ್ಟ ಪದ್ಮಲತಾಳ ಅಕ್ಕ

Donate Janashakthi Media

Leave a Reply

Your email address will not be published. Required fields are marked *