ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟರಾಗಿ ಗುರುತಿಸಿಕೊಂಡಿರುವ ಗುರುಪ್ರಸಾದ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ವಂಚನೆ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಖ್ಯಾತ
ಈ ಹಿನ್ನೆಲೆಯಲ್ಲಿ ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
2019ರಲ್ಲಿ ಟೋಟಲ್ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು.
ಇದನ್ನೂ ಓದಿ: ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನಲೆ: ರಾಹುಲ್ ಗಾಂಧಿ ಜಾರ್ಖಂಡ್‌ಗೆ ಭೇಟಿ
75 ಪುಸ್ತಕಗಳ ಐದು ಸೆಟ್ ಖರೀದಿಸಿದ್ದರಂತೆ. ಒಂದು ಸೆಟ್ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕು ಎಂದು ದೂರಿನಲ್ಲಿ ಉಲ್ಲೇಖಸಿದ್ದಾರೆ. ಇದಾದ ಬಳಿಕ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ಅವರಿಗೆ ಈ ಒಂದು ವಿಚಾರವಾಗಿ ಹಣ ನೀಡುವಂತೆ ಹಲವಾರು ಬಾರಿ ಕರೆ ಮಾಡಿದ್ದರು ಕೂಡ ಕರೆ ಸ್ವೀಕರಿಸುತ್ತಿರಲಿಲ್ಲ.
ಅಲ್ಲದೆ ಮನೆಯ ಬಳಿ ಹೋದರೆ ಮನೆಯ ವಿಳಾಸವನ್ನು ಕೂಡ ಬದಲಾಯಿಸಿದ್ದಾರೆ ಎಂದು ಲಕ್ಷ್ಮಿಕಾಂತ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕನ್ನಡದಲ್ಲಿ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.
ಇದನ್ನೂ ನೋಡಿ: ಪಿಎಂಎಲ್‌ಎ ಮತ್ತು ಯುಎಪಿಎ – ಎರಡು ಕರಾಳು ಶಾಸನಗಳ ಆಳ ಅಗಲ Janashakthi Media