ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ಮತ್ತು ಸೋದರ ಮಾವ ಮಧುಸೂದನ್ ರೆಡ್ಡಿ ವಿರುದ್ಧ ಬಾಲಿವುಡ್‌ನ ಖ್ಯಾತ ಗಾಯಕ ಲಕ್ಕಿ ಅಲಿ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಐಎಎಸ್ ಅಧಿಕಾರಿ ರಾಜ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಅಲಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಅಲಿ ದೂರು ಆಧರಿಸಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಕ ಮತ್ತು ಹಿರಿಯ ಐಎಎಸ್ ಅಧಿಕಾರಿಯ ನಡುವೆ ಟ್ರಸ್ಟ್ ಒಡೆತನದ ಭೂಮಿಯ ವಿಷಯವು ದೀರ್ಘಕಾಲದಿಂದ ಇದೆ. ಕೆಲವು ವರ್ಷಗಳ ಹಿಂದೆ, ಲಕ್ಕಿ ಅಲಿ ಸಾಮಾಜಿಕ ಮಾಧ್ಯಮದಲ್ಲಿ ಸ್ಥಳೀಯ ಪೊಲೀಸರು ಐಎಎಸ್ ಅಧಿಕಾರಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ವಿಷಯದ ಬಗ್ಗೆ ಮಧ್ಯಪ್ರವೇಶಿಸುವಂತೆ ಉನ್ನತ ಅಧಿಕಾರಿಗಳನ್ನು ವಿನಂತಿಸಿದ್ದರು.
ಇದನ್ನೂ ಓದಿ: ಮೂರು ತಿಂಗಳೊಳಗರ ಕಾನೂನುಬಾಹಿರ ಚಟುವಟಿಕೆಗಳ ಬಂದ್‌ಗೆ ಸಿಎಂ ಸೂಚನೆ
‘ಭೂ ಮಾಫಿಯಾ’ ಭೂಮಿಯನ್ನು ಅಕ್ರಮವಾಗಿ ಕಸಿದುಕೊಳ್ಳಲು ಪಿತೂರಿ ನಡೆಸಿದೆ ಎಂದು ಅವರು ಹೇಳಿದ್ದಾರೆ. ಈ ಆಸ್ತಿ ಯಲಹಂಕದ ಕಂಚೇನಹಳ್ಳಿ ಪ್ರದೇಶದಲ್ಲಿದೆ ಎಂದು ವರದಿಯಾಗಿದೆ.
ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅವರು ಸರ್ಕಾರದ ನಿಮಯಗಳನ್ನು ಗಾಳಿಗೆ ತೂರಿ ಸ್ವಿಮ್ಮಿಂಗ್ ಫೂಲ್ ನಿರ್ಮಾಣ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ನಾಯಕ ಸಾರಾ ಮಹೇಶ್ ದೂರಿದ್ದರು. ಇದೀಗ ಮತ್ತೆ ಭೂಕಬಳಿಕೆ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಇದೀಗ ಮತ್ತೆ ವಿವಾದದ ಕೇಂದ್ರದ ಸುದ್ದಿಯಲ್ಲಿ ಮುನ್ನೆಲೆಗೆ ಬಂದಿದೆ.
ಇದನ್ನೂ ನೋಡಿ: ಇರುವುದೊಂದೇ ಭೂಮಿ; ನಮಗಾಗಿ ಸಂರಕ್ಷಿಸೋಣ, ನೆಮ್ಮದಿಯಿಂದ ಬಾಳೋಣJanashakthi Media