ಬೆಂಗಳೂರು: ಬಿಜೆಪಿ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೆಸ್ಸೆಸ್ ಕುರಿತು ಕೇಳಿರುವ ಪ್ರಶ್ನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹೇಶ್ ಉದ್ದೇಶ ಪೂರಕವಾಗಿ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಗುಲಾಮ ಎಂದು ಸಂಬೋಧಿಸಿದ್ದು, ಜಾತಿಯನ್ನು ಅವಮಾನಿಸಿದ್ದಾರೆ. ದ್ವೇಷ ಹರಡುವ ಮತ್ತು ಮಾನಹಾನಿ ಮಾಡುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಎಸ್ಐಟಿ ಮುಂದುವರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡು ಬಂಧಿಸುವಂತೆ ಕೋರಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎನ್.ಆನಂದ್ ದೂರು ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಯೊಬ್ಬರು, ಮಹೇಶ್ ಅವರು ಮೈಸೂರಿನಲ್ಲಿ ಹೇಳಿಕೆ ನೀಡಿದ್ದು, ಹೀಗಾಗಿ, ತನಿಖೆಗಾಗಿ ಮೈಸೂರು ಪೊಲೀಸರಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ನೋಡಿ: KIADB | ಸುವರ್ಣ ಚಾನೆಲ್ ರಾಜೀವ್ ಚಂದ್ರಶೇಖರ್ ಕುಟುಂಬದ ಹಗರಣಗಳ ಬಗ್ಗೆ ದೂರು ದಾಖಲಿಸಿದ ವಕೀಲ Janashakthi Media
