ದಾವಣಗೆರೆ: ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರ ಡಿಜೆ ಸೌಂಡ್ ಸಿಸ್ಟಮ್ ಬಳಕೆ ನಿಷೇಧ ಆದೇಶ ವಿರೋಧಿಸಿ, ಪ್ರತಿಭಟನೆ ನಡೆಸಿದ ಹಾಗೂ ಪ್ರಚೋದನನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಾಗೂ ಅವರ ಬೆಂಬಲಿಗರ ವಿರುದ್ಧ ಆಗಸ್ಟ್ 30ರಂದು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಸಚಿವ
ಯುವಕರು ಡಿ.ಜೆ. ಬಳಸಿ, ತಾಕತ್ತಿದ್ದರೆ ಪೊಲೀಸರು, ಜಿಲ್ಲಾಡಳಿತ ಅದನ್ನು ತಡೆಯಲಿ ಎಂದು ರೇಣುಕಾಚಾರ್ಯ ಸವಾಲು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆಗಸ್ಟ್ 29 ರಾತ್ರಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರು | ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ, ಚಿಂತಕ ಎರಿಕ್ ಒಝಾರಿಯೋ ನಿಧನ
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಮುಗಿಯುವವರೆಗೂ ಜಿಲ್ಲೆಯಾದ್ಯಂತ ಡಿ.ಜೆ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಯ ಆದೇಶ ವಿರೋಧಿಸಿ ರೇಣುಕಾಚಾರ್ಯ ಅವರು ಕೆಲ ದಿನಗಳಿಂದ ನಿರಂತರವಾಗಿ ಜಿಲ್ಲಾಡಳಿತದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬೆಂಬಲಿಗರೊಂದಿಗೆ ಸೇರಿ ಹಲವು ಬಾರಿ ಪ್ರತಿಭಟನೆಯನ್ನೂ ನಡೆಸಿದ್ದರು.
ಸುಪ್ರೀಂ ಕೋರ್ಟ್ ಆದೇಶದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಬೇರೆ ಧರ್ಮದವರಿಗೂ ಇಂಥದೇ ಷರತ್ತುಗಳನ್ನು ವಿಧಿಸಲಿ ಎಂದು ಸವಾಲು ಹಾಕಿದ್ದರು.
ಇದನ್ನೂ ನೋಡಿ: ಪಿಚ್ಚರ್ ಪಯಣ – 161 – ‘ಸು ಫ್ರಾಮ್ ಸೋ’ ಜನಪ್ರಿಯತೆ ಏನನ್ನು ಸೂಚಿಸುತ್ತದೆ?.. ಕೆ.ಫಣಿರಾಜ್ Janashakthi Media
