ಬೆಂಗಳೂರು: ನವಿಲಿನ ಹಾರವನ್ನು ಮಾಜಿ ಸಚಿವ ಕೆ. ಶಿವನಗೌಡ ನಾಯಕ್ ಧರಿಸಿರುವ ಫೋಟೋ ಸಾಮಾಜಿಕ ಜಲತಾಣಗಳಲ್ಲಿ ಹರಿದಾಡಿದ್ದೂ, ಇದೀಗ ಅವರು ವಿವಾದದಲ್ಲಿ ಸಿಲುಕಿದ್ದಾರೆ.
ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಆರೋಪದಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ.
ಇದನ್ನೂ ಓದಿ: ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರುದ್ಧ ನಿರ್ಣಾಯಕ ಗೆಲುವಿಗೆ KPRS ಅಭಿನಂದನೆ
ರಾಷ್ಟ್ರಪಕ್ಷಿ ನವಿಲಿನ ಗರಿಯಿಂದ ತಯಾರಿಸಿದ ಹಾರವನ್ನು ಧರಿಸಿ ಸಾರ್ವಜನಿಕವಾಗಿ ಪ್ರದರ್ಶನ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗುತ್ತದೆ. ಶಿವನಾಯಕ್ ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸುವಂತೆ ಅವರು ಆಗ್ರಹಿಸಿದ್ದಾರೆ.
