ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ನೀರಾವರಿ ಯೋಜನೆಗಳು ಪೂರ್ಣ | ರಾಮಲಿಂಗಾರೆಡ್ಡಿ

ಬೆಳಗಾವಿ: ಕೃಷ್ಣ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ ಯೋಜನೆಗಳಲ್ಲಿ ಮೂರು, ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿ 11 ಯೋಜನೆಗಳು ಪೂರ್ಣಗೊಂಡಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್‌ನಲ್ಲಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಡಿ-7 ರಂದು ಪ್ರಶ್ನೋತ್ತರ ಕಲಾಪದಲ್ಲಿ ವಿಧಾನ ಪರಿಷತ್‌ ಸದಸ್ಯ ತಳವಾರ ಸಾಬಣ್ಣ ಅವರು, ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ವ್ಯಾಪ್ತಿಯಲ್ಲಿರುವ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳು ಮತ್ತು ಈ ಯೋಜನೆಗಳಿಗೆ ಕಳೆದ 5 ವರ್ಷಗಳಲ್ಲಿ ಮಾಡಿದ ವೆಚ್ಚ, ಕಾಲುವೆಗಳ ದುಸ್ಥಿತಿ ಸೇರಿದಂತೆ ಅಧಿಕಾರಿಗಳ, ಗುತ್ತಿಗೆದಾರರ ವಂಚನೆ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಇದನ್ನೂ ಓದಿ:5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ | ಸಚಿವ ರಾಮಲಿಂಗಾ ರೆಡ್ಡಿ

ಎರಡು ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ತಯಾರಾಗಬೇಕು. ಈ ವೇಳೆ ಆಂಧ್ರ ಮತ್ತು ತೆಲಂಗಾಣ ರಾಜ್ಯದವರು ಗೆಜೆಟ್ ತಯಾರಿಸದಂತೆ ನ್ಯಾಯಲಯದ ಮೊರೆ ಹೋದ ಕಾರಣ ಕೆಲಸ ಮುಂದುವರೆದಿಲ್ಲ. ಬೂದಿಹಾಳ- ವೀರಾಪುರ ಏತ ನೀರಾವರಿ ಯೋಜನೆ ವಿಸ್ತರಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ವ್ಯಾಪ್ತಿಯ ಕೃಷ್ಣ ಜಲಭಾಗ್ಯ ನಿಗಮದ ಯೋಜನೆಗಳಿಗೆ 1,306 ಕೋಟಿ ಹಣವನ್ನು ಕಳೆದ 5 ವರ್ಷದಲ್ಲಿ ವೆಚ್ಚ ಮಾಡಲಾಗಿದೆ. ಕರ್ನಾಟಕ ನೀರಾವರಿ ನಿಗಮದ 11 ಯೋಜನೆಗಳಿಗೆ ಕಳೆದ 5 ವರ್ಷದಲ್ಲಿ 489 ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಹೂಳು, ಅವಶ್ಯಕ ದುರಸ್ತಿ ಸೇರಿದಂತೆ ನೀರು ಹರಿಸಲು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಎಲ್ಲಾ ಟೆಂಡರ್‌ಗಳನ್ನು ಇ- ಪ್ರಕ್ಯೂರ್ಮೆಂಟ್ ಮೂಲಕವೇ ಪಾರದರ್ಶಕವಾಗಿ ಮಾಡಲಾಗಿದೆ. ಗುಣಮಟ್ಟ ಖಾತರಿಗೂ ಆದ್ಯತೆ ನೀಡಲಾಗಿದ್ದು, ಯಾವುದೇ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳನ್ನು ನೀಡುತ್ತಿಲ್ಲ ಎಂದು ಹೇಳಿದರು.

ವಿಡಿಯೋ ನೋಡಿ:ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ – ಡಾ. ಮೀನಾಕ್ಷಿ ಬಾಳಿ

Donate Janashakthi Media

Leave a Reply

Your email address will not be published. Required fields are marked *