ಖಾತರಿ ಪಡಿಸಿಕೊಳ್ಳಲು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯ ಆರಂಭ

ಬೆಂಗಳೂರು: ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಕುರಿತು ಖಾತರಿ ಪಡಿಸಿಕೊಳ್ಳಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಕಾರ್ಯ ಆರಂಭವಾಗಿದೆ.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದ್ದು, ಜೂನ್‌ 30ರವರೆಗೆ ಕಾಲಾವಕಾಶವಿದೆ. ನಗರದಾದ್ಯಂತ ಸಮೀಕ್ಷಾ ಕಾರ್ಯ ನಡೆಯುತ್ತಿದ್ದು, ಪ್ರತಿ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿರುವ ಕುರಿತು ಖಾತರಿಪಡಿಸಿಕೊಂಡು ಸ್ಟಿಕರ್ ಅಂಟಿಸಲಾಗುತ್ತದೆ.

ಇದನ್ನೂ ಓದಿ: ಭದ್ರಾವತಿ| ತೋಟಗಾರಿಕೆ ಇಲಾಖೆ: ಸಹಾಯಧನಕ್ಕೆ ಆಸಕ್ತ ರೈತರಿಗೆ ಅರ್ಜಿ ಆಹ್ವಾನ

ಸ್ಟಿಕ್ಕರ್ ಅಂಟಿಸುವ ಕಾರ್ಯಕ್ಕೆ ಕಾಲೇಜುಗಳ ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳ ಸ್ವಯಂಸೇವಕರ ತಂಡಗಳನ್ನು ರಚಿಸಲಾಗಿದೆ. ಯಾವುದಾದರೂ ಮನೆಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದಲ್ಲಿ ಸ್ಟಿಕ್ಕರ್‌ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಆನ್‌ಲೈನ್ ಮೂಲಕ ಸ್ವಯಂ ಪ್ರೇರಿತವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಾಗೃತಿ ಮೂಡಿಸಲಿದ್ದಾರೆ. ಹತ್ತಿರದ ಬೆಂಗಳೂರು ಒನ್, ಬಿಬಿಎಂಪಿ ವಾರ್ಡ್ ಕಚೇರಿಗಳಲ್ಲೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರು ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸದವರು ಕೂಡಲೇ ಭಾಗವಹಿಸುವಂತೆ ಬಿಬಿಎಂಪಿ ಮನವಿ ಮಾಡಿದೆ.

ಇದನ್ನೂ ನೋಡಿ: POSH ಕಾಯ್ದೆ ಎಂದರೇನು ಮತ್ತು ಅದು ಹೇಗೆ ಕೆಲಸ ಮಾಡುತ್ತದೆ?Janashakthi Media

Donate Janashakthi Media

Leave a Reply

Your email address will not be published. Required fields are marked *