ನವದೆಹಲಿ : ಅಮೆರಿಕದಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣದ ಆರೋಪಗಳನ್ನು ಕೈಬಿಡಲು ಅಲ್ಲಿನ ಅಧಿಕಾರಿಗಳು ಮುಂದಾಗಿರುವ ಬೆನ್ನಲ್ಲೇ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಸಮಾಧಾನಕ್ಕೆ ಬಂದ ಪ್ರಧಾನಿ, ದೇಶದ ವ್ಯಾಪಾರ ಒಪ್ಪಂದಕ್ಕಿಂತ ಅದಾನಿಯ ಬಿಡುಗಡೆಗಾಗಿ ಮಾತುಕತೆ ನಡೆಸಿದರು” ಎಂದು ಅವರು ಆರೋಪಿಸಿದ್ದಾರೆ.ಅದಾನಿಗಾಗಿ
ಅಮೆರಿಕದ ನ್ಯಾಯಾಂಗ ಇಲಾಖೆ ಅದಾನಿ ವಿರುದ್ಧದ ಕ್ರಿಮಿನಲ್ ವಂಚನೆ ಪ್ರಕರಣವನ್ನು ಕೈಬಿಡಲು ಸಿದ್ಧವಾಗಿದೆ ಎಂಬ ವರದಿಗಳ ನಂತರ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ಭಾರತದ ಹಿತಾಸಕ್ತಿಗಿಂತ ಒಬ್ಬ ಉದ್ಯಮಿಯ ಹಿತಾಸಕ್ತಿಗೆ ಆದ್ಯತೆ ನೀಡಲಾಗಿದೆ” ಎಂದು ಅವರು ಟೀಕಿಸಿದ್ದಾರೆ.
ಇದನ್ನೂ ಓದಿ : ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ
ಗೌತಮ್ ಅದಾನಿ ವಿರುದ್ಧ ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದ ಕುರಿತು ಅಮೆರಿಕದಲ್ಲಿ ತನಿಖೆ ನಡೆಯುತ್ತಿತ್ತು. ಇದೇ ಪ್ರಕರಣದಲ್ಲಿ ಅಮೆರಿಕದ ಷೇರುಪೇಟೆ ನಿಯಂತ್ರಣ ಸಂಸ್ಥೆಯೊಂದಿಗಿನ ನಾಗರಿಕ ವ್ಯಾಜ್ಯವನ್ನು ಒಪ್ಪಂದದ ಮೂಲಕ ಬಗೆಹರಿಸುವ ಪ್ರಕ್ರಿಯೆಯೂ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಈ ಬೆಳವಣಿಗೆಯನ್ನು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಅಸ್ತ್ರವನ್ನಾಗಿ ಬಳಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೌತಮ್ ಅದಾನಿ ನಡುವಿನ ಸಂಬಂಧವನ್ನು ಉಲ್ಲೇಖಿಸಿದ ಪ್ರತಿಪಕ್ಷ ನಾಯಕರು, “ದೇಶದ ಆಡಳಿತ ವ್ಯವಸ್ಥೆ ಕಾರ್ಪೊರೇಟ್ ಪ್ರಭಾವಕ್ಕೆ ಒಳಗಾಗಿದೆ” ಎಂದು ಆರೋಪಿಸಿದ್ದಾರೆ. ಬಿಜೆಪಿ ನಾಯಕರು ಮಾತ್ರ ಕಾಂಗ್ರೆಸ್ನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಅದಾನಿಗಾಗಿ
ಇದನ್ನೂ ನೋಡಿ : ಕರ್ನಾಟಕಕ್ಕೂ ಬಂದೇ ಬಿಡ್ತು..SIR….ಎಚ್ಚರ ಎಚ್ಚರ Janashakthi Media
