ಹಾವೇರಿ: ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ 2025 ಮಾರ್ಚ-03 ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ಧಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು. ಬೇಡಿಕೆ
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮಾರ್ಚ್-03 ಗ್ರಾಮ ಪಂಚಾಯತ ನೌಕರರು, ಮಾರ್ಚ-04 ಬಿಸಿಯೂಟ ನೌಕರರು, ಮಾರ್ಚ-05 ಕಟ್ಟಡ ಕಾರ್ಮಿಕರು, ಮಾರ್ಚ-06 ಹಮಾಲಿ ಕಾರ್ಮಿಕರು ಸೇರಿದಂತೆ ವಿವಿಧ ವಲಯದ ಅಸಂಘಟಿತ ಹಾಗೂ ಕಾರ್ಖಾನೆ ಕಾರ್ಮಿಕರು ಮಾರ್ಚಿ-07 ರಂದು ಅಂಗನವಾಡಿ ನೌಕರರು ಸಾವಿರಾರು ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಭಾಗವಹಿಸಲಿದ್ದು ಈ ಹೋರಾಟ ಕರ್ನಾಟಕದ ಶ್ರಮಜೀವಿಗಳ ಹೋರಾಟಗಳ ಪರ್ವವಾಗಲಿದೆ ಎಂದರು. ಬೇಡಿಕೆ
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಇತ್ತೀಚಿಗೆ ಮಂಡಿಸಿದ 2025-26 ನೇ ಸಾಲಿನ ಬಜೆಟ್ ಮತ್ತೊಮೆ ಶೇ 99 ರಷ್ಟಿರುವ ದುಡಿಯುವ ವರ್ಗಕ್ಕೆ ದ್ರೋಹ ಬಗೆದಿದೆ. ಹಾಗೂ ದೇಶದ ಶೇ 1 ರಷ್ಟು ಇರುವ ಶ್ರೀಮಂತರ ಪಕ್ಷಪಾತಿಯಾಗಿದೆ. ಇದುವರೆಗೂ ನಮ್ಮ ಸಾರ್ವಜನಿಕ ಹೆಮ್ಮೆಯ ಕ್ಷೇತ್ರಗಳಾದ ವಿದ್ಯುತ್, ತೈಲ, ಸಾರಿಗೆ ಮತ್ತು ಹೆದ್ದಾರಿಗಳು, ಕಲ್ಲಿದ್ದಲು ಮತ್ತು ಇತರ ಖನಿಜಗಳು ಸೇರಿದಂತೆ ಅಮೂಲ್ಯವಾದ ಮೂಲಸೌಕರ್ಯಗಳು, ಅಮೂಲ್ಯ ಖನಿಜಗಳು, ಸಾರ್ವಜನಿಕ ಸೇವಾ ಜಾಲ ಇತ್ಯಾದಿಗಳನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸಲು ಬೇಕಾದ ಸ್ಪಷ್ಟ ನೀಲಿ ನಕ್ಷೆಯನ್ನು ಸಿದ್ಧಪಡಿಸಿದೆ. ಬೇಡಿಕೆ
ಇದನ್ನೂ ಓದಿ: ನವಗ್ರಹ ಸಿನಿಮಾದ ಖ್ಯಾತಿಯ ಗಿರಿ ದಿನೇಶ್ ನಿಧನ
ಅದೇ ವೇಳೆಗೆ ನಮ್ಮ ದೇಶದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಆಹಾರ ಪೂರೈಸಲು ಬೇಕಾದ ಸಂಪನ್ಮೂಲವನ್ನು ಕಡಿತಗೊಳಿಸಿದೆ. ದೇಶದ ದುಡಿಯುವ ಜನ ವಿಭಾಗಗಳಾದ ಅಂಗನವಾಡಿ, ಬಿಸಿಯೂಟ, ಆಶಾ, ಉದ್ಯೋಗ ಖಾತ್ರಿ ಮೊದಲಾದ ಯೋಜನೆಗಳಿಗೆ ಹಾಗೂ ಅಲ್ಲಿ ದುಡಿಯುತ್ತಿರುವ ಕೋಟ್ಯಾಂತರ ಗೌರವ ಧನ ಆಧಾರದಲ್ಲಿ ನೌಕರರು, ಹಾಗೂ ಅಸಂಘಟಿತ ಕಾರ್ಮಿಕ ವರ್ಗದ ಜೀವನೋಪಾಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಬೇಡಿಕೆ
ಕೇಂದ್ರದಲ್ಲಿನ ಎನ್‌ಡಿಎ ಸರ್ಕಾರವು ಅನುಸರಿಸುವ ಆರ್ಥಿಕ ನೀತಿಗಳನ್ನೇ ರಾಜ್ಯದ ಕಾಂಗ್ರೆಸ್ ಸರ್ಕಾರವು ಬಹುತೇಕ ಅನುಸರಿಸುತ್ತಿದೆ. ಬಿಜೆಪಿ ನೇತ್ರತ್ವದ ಎನ್‌ಡಿಎ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ಜೋರು ಧ್ವನಿಯಲ್ಲಿ ಮಾತಾಡುತ್ತಾರೆ. ಆದರೆ ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ವಿಭಿನ್ನ ರೀತಿಯಲ್ಲಿ ರೂಪಿಸಲು ಆಗುತ್ತಿಲ್ಲ. ಈ ಎರಡೂ ಪಕ್ಷಗಳು ಬೇರೆ ಬೇರೆಯಾದರೂ ನೀತಿಗಳೆಲ್ಲ ಒಂದೇಯಾಗಿವೆ. ರಾಜ್ಯದ ಕಾಂಗ್ರೆಸ್ 2023ರ ವಿಧಾನ ಸಭಾ ಚುನಾವಣೆಗಳ ಸಂದರ್ಭದಲ್ಲಿ ಕನಿಷ್ಠ ವೇತನದ ವೈಜ್ಞಾನಿಕ ಪುನರಿಮರ್ಶೆ ಭರವಸೆ ನೀಡಲಾಗಿತ್ತು ಆದರೆ ಆ ಬಗ್ಗೆ ಕ್ರಮವಹಿಸಿಲ್ಲ. ಬದಲಾಗಿ ಬಿಜೆಪಿ ಜಾರಿಗೊಳಿಸಿದ್ದ ಕೆಲಸದ ಅವಧಿಯನ್ನು ಹೆಚ್ಚಿಸುವ ಆದೇಶವನ್ನು ಹಿಂಪಡೆಯಲಿಲ್ಲ.
ಮಹಿಳಾ ಕಾರ್ಮಿಕರಿಗೆ ರಾತ್ರಿ ಪಾಲಿಯಲ್ಲಿ ಕೆಲಸಮಾಡಿಸಲು ಅವಕಾಶ ನೀಡುವ ಕಾನೂನು ತಿದ್ದುಪಡಿಗಳನ್ನು ವಾಪಸ್ ಪಡೆಯಲಿಲ್ಲ. ಹಮಾಲಿ, ಆಟೋ, ಮನಕೆಲಸ, ಬೀದಿಬದಿ ಮೊದಲಾದ ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಯೋಜನೆಗಳ ಜಾರಿಗೆ ಅಗತ್ಯವಿರುವ ಅನುದಾನವನ್ನು ನೀಡಲಿಲ್ಲ. ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸರ್ಕಾರಿ ಯೋಜನೆಗಳಲ್ಲಿ ಕೆಲಸಮಾಡುವ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಯಾವುದೇ ಕ್ರಮವಹಿಸಲಿಲ್ಲ. ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ, ಆವೈಜ್ಞಾನಿಕವಾಗಿ ಕೃಷಿಯೋಗ್ಯ ಭೂಮಿಯನ್ನು ಸ್ವಾಧೀನಗೊಳಿಸುವುದನ್ನು ನಿಲ್ಲಿಸುವುದು ಮುಂತಾದ ಹಲವು ಭರವಸೆಗಳನ್ನು ಈಡೇರಿಸಲಿಲ್ಲ.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸಮಪರ್ಕವಾಗಿ ಜಾರಿಗೊಳಿಸುತ್ತಿಲ್ಲ. ಗ್ರಾಮಪಂಚಾಯತ್ ನೌಕರರ ಸೇರಿ ಇತರೆ ಗುತ್ತಿಗೆ ಹೊರ ಗುತ್ತಿಗೆ ನೌಕರರ ನ್ಯಾಯಬದ್ದವಾಗಿ ಸಿಗಬೇಕಾದ ಕನಿಷ್ಟ ವೇತನ ಕಾರ್ಮಿಕ ಕಾನೂನುಗಳ ಜಾರಿ ವಿಷಯದಲ್ಲಿ ಅಗತ್ಯ ಕ್ರಮ ಮತ್ತು ಅನುದಾನ ನೀಡುತ್ತಿಲ್ಲ. ಈ ಬೇಡಿಕೆಗಳ ಈಡೇರಿಕೆಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಅವುಗಳನ್ನು ಈಡೇರಿಸಲು ಸರಕಾರಗಳು ಮುಂದಾಗದಿರುವುದು ನೋವಿನ ಸಂಗತಿ. ಹಾಗಾಗಿ ಈ ಕೆಳಗಿನ ಬೇಡಿಕೆಗಳಿಗಾಗಿ ಅನಿರ್ದಿಷ್ಠ ಹೋರಾಟ ಹಮ್ಮಿಕೊಂಡಿದೆ ಎಂದರು.
ಬೇಡಿಕೆಗಳು:
1. 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿರುವ ಕೇಂದ್ರದ ಶಾಸನಗಳ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. ಕಾರ್ಮಿಕರ ಪರವಾದ ಕಾನೂನುಗಳು ಜಾರಿಯಾಗಬೇಕು.
2. ಬೆಲೆ ಏರಿಕೆ ಆಧಾರದಲ್ಲಿನ ತುಟ್ಟಿಭತ್ಯೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿನ ಅಕುಶಲ ಕಾರ್ಮಿಕರಿಗೆ ಸಮಾನ ಕನಿಷ್ಠ ವೇತನರೂ. 31366/- ಜಾರಿ ಮಾಡಬೇಕು.
3. ರಾಜ್ಯದಲ್ಲಿ ಕಾರ್ಖಾನೆ ಕಾಯ್ದೆಗೆ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ಕೈಗಾರಿಕಾ ವಿವಾದಗಳ ಕಾಯಿದೆ. ನಿಶ್ಚಿತ ಕಾಲಾವಧಿಕಾರ್ಮಿಕರ ನೇಮಕಕ್ಕೆ ಅವಕಾಶ ನೀಡುವ ಸಲುವಾಗಿ ಮಾದರಿ ಸ್ಥಾಯಿ ಆದೇಶಗಳಿಗೆ ಮಾಡಲಾಗಿರುವಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ಸು ಪಡೆಯಬೇಕು.
4. ಖಾಯಂ ಅಲ್ಲದ ನೌಕರರ ಶೋಷಣೆಯನ್ನು ಹೆಚ್ಚಿಸುವ “ಕಾರ್ಮಿಕ ಸೇವೆಗಳ ವಿವಿದ್ಯೋಶ ಸಹಕಾರ ಸಂಘ’ದ ರಚಿನೆಯನ್ನು ಕೈಬಿಟ್ಟು ಕನ್ಸರ್‌ಮೆಂಟ್ ಆಫ್ ಪರ್ಮನೆಂಟ್ ಸ್ಟೇಟಸ್ ಟು ಟೆಂಪರರಿ ವರ್ಕ್‌ಮನ್ ಕಾಯ್ದೆ”ಯನ್ನು ಜಾರಿ ಮಾಡಿ, ಕರ್ನಾಟಕ ಸರ್ಕಾರದ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಗುತ್ತಿಗೆ ಮತ್ತು ಹೋರಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡಬೇಕು. ಖಾಯಂ ಮಾಡುವ ತನಕ ಸಮಾನ ಕೆಲಸಕ್ಕೆ -ಸಮಾನ ವೇತನವನ್ನು ಸಾರ್ವಜನಿಕ ಉದ್ದಿಮೆಗಳು, ನಿಗಮ ಮಂಡಳಿಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮತ್ತು ಖಾಸಗಿ ಕಂಪನಿಗಳಲ್ಲಿ ದುಡಿಯುವ ಕಾರ್ಮಿಕರಿಗೆ ಜಾರಿ ಮಾಡಬೇಕು.
5. ಮಹಿಳೆಯರನ್ನು రాత్రి పౌళయల్లి మత్తు వాయకారి ಕೆಲಸಗಳಲ್ಲೂ ದುಡಿಸಿಕೊಳ್ಳಲು ನೀಡಿರುವರಿಯಾಯಿತಿರದ್ದು ಮಾಡಬೇಕು. ಎಲ್ಲಾ ವಿಭಾಗದ ದುಡಿಯುವ ಮಹಿಳೆಯರಿಗೆ ಕನಿಷ್ಟ ವರ್ಷದಲ್ಲಿ 12 ದಿನಗಳು ಸಂಬಳ ಸಹಿತ ಮುಟ್ಟಿನರಜೆಯನ್ನು ಜಾರಿಗೊಳಿಸಬೇಕು.
6. ಹಮಾಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಟೈಲಗಳು, ಮೆಕ್ಯಾನಿಕ್‌ಗಳು ಮನೆಗೆಲಸ ಮಹಿಳೆಯರು ಟೈಲರ್ ಗಳು ಸೇರಿ ವಿವಿಧ ವಿಭಾಗಳಿಗೆ ಈಗಾಗಲೇ ಕಾರ್ಮಿಕ ಇಲಾಖೆ ರೂಪಿಸಿರುವ ಆಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಮತ್ತು ಭವಿಷ್ಯ ನಿಧಿ ಯೋಜನೆಜಾರಿಗಾಗಿ ಕನಿಷ್ಠ 500 ಕೋಟಿ ಹಣವನ್ನು ಬಜೆಟ್ ನಲ್ಲಿ ನೀಡಬೇಕು ಹಾಗೂ ಆ ವಿಭಾಗದ ಕಾರ್ಮಿಕರಿಗೆ ನಿರಂತರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಸೆಸ್ ಸಂಗ್ರಹಕ್ಕೆ ಸರ್ಕಾರ ಕ್ರಮವಹಿಸಬೇಕು
7. ಕಟ್ಟಡ ಹಾಗು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಅಸಂಘಟಿತ ಕಾರ್ಮಿಕರ ಕಲ್ಯಾಣ ಹಾಗೂ ಇತ್ತೀಚೆಗೆ ರಚಿಸಲಾದ ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಮುಂದೆ ರಚಿಸಲಾಗುವ ಗಿಗ್ ಕಾರ್ಮಿಕ ಕಲ್ಯಾಣ ಮಂಡಳಿ ಮೊದಲಾದ ತ್ರಿಪಕ್ಷೀಯ ಮಂಡಳಿ/ಸಮಿತಿಗಳಲ್ಲಿ ಸಿಐಟಿಯು ಪ್ರತಿನಿಧಿಗಳನ್ನು ಸೇರ್ಪಡೆ ಮಾಡಬೇಕು.
8. ಕರ್ನಾಟಕ ಕಾರ್ಮಿಕ ಅಧ್ಯಯನ ಸಂಸ್ಥೆಯನ್ನು ಬಲಪಡಿಸಿ ಅಭಿವೃದ್ಧಿಪಡಿಸಬೇಕು. “ಕರ್ನಾಟಕ ಕಾರ್ಮಿಕ ಸಮ್ಮೇಳನ” ರಚಿಸಬೇಕು.
9. ಬಿಸಿಯೂಟ ಯೋಜನೆಯ ಯಾವುದೇ ಸ್ವರೂಪದ ಖಾಸಗೀಕರಣ ಕೈಬಿಡಬೇಕು. ನೌಕರರಿಗೆ ವೇತನ ಹೆಚ್ಚಳ ಮಾಡಬೇಕು. ಈಗಾಗಲೇ ಒಪ್ಪಿರುವ ನಿವೃತ್ತ ನೌಲಭ್ಯ ಜಾರಿ ಮಾಡಬೇಕು ಆದುವರೆಗೂ ಯಾರನ್ನು ಕೆಲಸದಿಂದ ಬಿಡುಗಡೆ ಮಾಡಬಾರದು.
10. ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ. ಪೂರ್ವ ಪ್ರಾರ್ಥ ಶಿಕ್ಷಣ ಕಡ್ಡಾಯಗೊಳಿಸಿ, ಕಾಯ್ದೆಯಡಿ ಅಖನ್ನು ತರಬೇಕು. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಆ ಮತ್ತು ಆ ಗುಂಪಿನ ನೌಕರರನ್ನಾಗಿ ಪರಿಗಣಿಸಿ,
11. ಸಾರ್ವಜನಿಕ ಉದ್ದಿಮೆಗಳ ಹಾಗೂ ಸೇವೆಗಳ ಖಾಸಗೀಕರಣದ ನೀತಿಗಳನ್ನು ಕೈಬಿಡಬೇಕು. ವಿದ್ಯುತ್ ಚ್ಛಕ್ತಿ ಖಾಸಗೀಕರಣ ಕೈಬಿಟ್ಟ, ವಿದ್ಯುತ್ ತಿದ್ದಪಡಿ ಮಸೂದೆ 2020ನ್ನು ತಿರಸ್ಕರಿಸಬೇಕು.
12. ಕಾರ್ಮಿಕ ಸಂಘದ ಮಾನ್ಯತೆಗೆ, ಗುತ್ತಿಗೆ ಮುಂತಾದ ಖಾಯಮೇತರ ಕಾರ್ಮಿಕರ ಕೆಲಸದ ಖಾಯಂ ಮಾತಿಗೆ ಶಾಸನ ರೂಪಿಸಿ ಜಾರಿಗೊಳಿಸಬೇಕು.
13. ಕಟ್ಟಡ ಕಾಮಿಕರಿಗೆ ಘೋಷಿಸಿರುವ ಎಲ್ಲ ಸೌಲಭ್ಯಗಳನ್ನು ಜಾರಿಗೊಳಿಸಬೇಕು. ಮತ್ತು ಕಲ್ಯಾಣ ಮಂಡಳಿ ನಿಧಿ ದುರುಪಯೋಗ ನಿಲ್ಲಬೇಕು. ವಿವಿಧ ಕಿಟ್ ಖರೀದಿಗಳಲ್ಲಿ ನಡೆದಿರುವ ಭ್ರಷ್ಟಚಾರ ತನಿಖೆಯಾಗಬೇಕು ಮತ್ತು ಬಾಕಿ ಹೈಕೋರ್ಟ ತೀರ್ಪಿನಂತೆ ಶೈಕ್ಷಣಿಕ ಜಾರಿಗೊಳಿಸಬೇಕು ಹಾಗೂ ಮದುವೆ, ಪಿಂಚಣಿ, ಆರೋಗ್ಯ ಅರ್ಜಿಗಳಿಗೆ ಕೂಡಲೇ ಧನ ಸಹಾಯ ಪಾವತಿಯಾಗಬೇಕು. ಕಟ್ಟಡ ಸಾಮಾಗ್ರಿಗಳ ಮೇಲಿನ ಜಿ.ಎಸ್.ಟಿ ಕಡಿತ ಮಾಡಬೇಕು.
14. ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡುವುದರಲ್ಲಿ ಕೊರತೆಯಾಗಿರುವ ರೂ.380 ಕೋಟಿ ಹಣವನ್ನು ಬಿಡುಗಡೆ ಮಾಡಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಬೇಕು. ಇಎಫ್‌ಎಂಎಸ್ ಗೆ ಸೇರ್ಪಡೆಯಾಗದೆ ಉಳಿದಿರುವ ನೌಕರರನ್ನು ಸೇರಿಸಬೇಕು. ಕಸಗುಡಿಸುವವರಿಗೆ ಅನುಮೋದನೆ ನೀಡಬೇಕು ಮತ್ತು ಕನಿಷ್ಠ ವೇತನ ಪರಿಷ್ಕರಣೆ ಆಗಬೇಕು.
15. ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಎಲ್ಲಾ ಮುನಿಸಿಪಲ್ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಬೇಕು. ಉಳಿದವರಿಗೆಲ್ಲ ಗುತ್ತಿಗೆರದ್ದು ಮಾಡಿ ನೇರ ಪಾವತಿ ಅಡಿಯಲ್ಲಿ ಸಂಬಳ ಪಾವತಿ ಮಾಡಬೇಕು.
16. ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಯೋಜನೆಗಳನ್ನು ಜಾರಿಗೆ ತರಬೇಕು. ಬೀಡಿ ಕಾರ್ಮಿಕರ ಎಲ್ಲಾ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಬೇಕು.
17. ಎನ್ಪಿಎಸ್ ಅನ್ನು ರದ್ದುಗೊಳಸಿ ಹಾಗು ಹಳೆಯ ಪೆನ್ನನ್ ಸ್ಟೀಮ್ ಅನ್ನು ಮರುಸ್ಥಾಪಿಸಿ
18. ಯೋಗ್ಯ ವೇತನ ಮತ್ತು ಉದ್ಯೋಗ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಮಾಧ್ಯಮ ಸಂಸ್ಥೆಗಳ ಪತ್ರಕರ್ತರು ಮತ್ತುಕಾರ್ಮಿಕರನ್ನು ಸೇರಿಸಲುಕಾರ್ಯನಿರತ ಪತ್ರಕರ್ತರ ಕಾಯಿದೆಗೆ ತಿದ್ದುಪಡಿ ತರಬೇಕು. ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ವೇತನ ಪರಿಷ್ಕರಿಸಲು ಅನುಕೂಲವಾಗುವಂತೆ ಹೊಸ ವೇತನ ಮಂಡಳಿಯನ್ನು ರಚಿಸುವುದು.
ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಸಂಚಾಲಕ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂದಾನೆಪ್ಪ ಕೆ ಹೆಬಸೂರು, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆ ಜಿಲ್ಲಾ ಮುಖಂಡರಾದ ರಾಜೇಶ್ವರಿ ಹಿರೇಮಠ, ಸಿದ್ದಮ್ಮ ಚೌಟಿ, ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಇದ್ದರು.
ಇದನ್ನೂ ನೋಡಿ: ಕೇಂದ್ರ ಬಜೆಟ್ 2025 : ಬಡವರಿಗೆ ಏನೂ ಇಲ್ಲ! ಶ್ರೀಮಂತರಿಗಾಗಿ ಮಂಡಿಸಿದ ಬಜೆಟ್ Janashakthi Media