ಎಸ್‌ಐಆರ್‌ ಕುರಿತು ಆತಂಕ: ಮುಖ್ಯಮಂತ್ರಿ ಮಧ್ಯಪ್ರವೇಶಕ್ಕೆ ಪ್ರಕಾಶ್‌ ರಾಜ್‌ ಸೇರಿ ನಾಗರಿಕ ಸಂಘಟನೆಗಳ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಹಲವು ನಾಗರಿಕ ಸಂಘಟನೆಗಳು ಆತಂಕ ವ್ಯಕ್ತಪಡಿಸಿದ್ದು, ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯದಂತೆ ಮುಖ್ಯಮಂತ್ರಿ ಮಧ್ಯಪ್ರವೇಶಿಸಬೇಕು ಎಂದು ನಟ ಪ್ರಕಾಶ್‌ ರಾಜ್‌ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಎಸ್‌ಐಆರ್‌

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರನ್ನು ಭೇಟಿಯಾದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಪ್ರಭುತ್ವದ ದೃಷ್ಟಿಯಿಂದ ಅಗತ್ಯವಾದ ಪ್ರಕ್ರಿಯೆಯಾಗಿದ್ದರೂ, ಅದರ ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕಿಗೆ ಯಾವುದೇ ರೀತಿಯ ಧಕ್ಕೆಯಾಗಬಾರದು ಎಂದು ಹೇಳಿದ್ದಾರೆ.

ಎಸ್‌ಐಆರ್‌ ಸಂದರ್ಭದಲ್ಲಿ ಗೈರುಹಾಜರು, ಸ್ಥಳಾಂತರಗೊಂಡವರು, ಮೃತಪಟ್ಟವರು, ಪುನರಾವರ್ತಿತ ನೋಂದಣಿ ಸೇರಿದಂತೆ ವಿವಿಧ ಕಾರಣಗಳಡಿ ಗುರುತಿಸಲಾದ ಮತದಾರರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿರುವುದು ಕಳವಳಕ್ಕೆ ಕಾರಣವಾಗಿದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಉದ್ಯೋಗ, ಶಿಕ್ಷಣ ಹಾಗೂ ಇತರ ಕಾರಣಗಳಿಂದ ಜನರು ಪದೇಪದೇ ವಾಸಸ್ಥಳ ಬದಲಾಯಿಸುವುದರಿಂದ ಮತದಾರರ ಪಟ್ಟಿಯಲ್ಲಿನ ವಿಳಾಸ ಮತ್ತು ಪ್ರಸ್ತುತ ವಾಸಸ್ಥಳದ ನಡುವೆ ವ್ಯತ್ಯಾಸ ಉಂಟಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಹಳೆಯ ವಿಳಾಸದಲ್ಲಿ ಹೆಸರು ಇರುವುದನ್ನು ಮಾತ್ರ ಆಧರಿಸಿ ಒಬ್ಬ ಮತದಾರನನ್ನು ಸ್ಥಳಾಂತರಗೊಂಡವರೆಂದು ಪರಿಗಣಿಸಬಾರದು. ಪ್ರತಿಯೊಬ್ಬರ ಮಾಹಿತಿಯನ್ನು ಸೂಕ್ತವಾಗಿ ಪರಿಶೀಲಿಸಿ, ಅರ್ಹತೆ ಇರುವವರಿಗೆ ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ನಾಗರಿಕ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಎಸ್‌ಐಆರ್‌: 46% ಮತದಾರರ ಹೆಸರು ಕರಡು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಎಸ್‌ಐಆರ್‌

ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಹೆಸರು ಕಾಣಿಸದಿರುವ ಅರ್ಹ ನಾಗರಿಕರಿಗೆ ಆಕ್ಷೇಪಣೆ ಹಾಗೂ ಮರುಸೇರ್ಪಡೆಗೆ ಸಾಕಷ್ಟು ಕಾಲಾವಕಾಶ ಮತ್ತು ಸರಳ ವ್ಯವಸ್ಥೆ ಕಲ್ಪಿಸಬೇಕು. ಈ ಪ್ರಕ್ರಿಯೆಯ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡುವ ಜತೆಗೆ, ಚುನಾವಣಾ ಅಧಿಕಾರಿಗಳ ಮಟ್ಟದಲ್ಲಿ ಅಗತ್ಯ ಸಹಾಯವನ್ನೂ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಯಾವುದೇ ಪಕ್ಷದ ಪರ ಅಥವಾ ವಿರೋಧದ ಧೋರಣೆ ಇರಬಾರದು. ಮತದಾರರ ಪಟ್ಟಿಯ ಶುದ್ಧೀಕರಣದ ಜತೆಗೆ ಒಬ್ಬನೇ ಒಬ್ಬ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಚುನಾವಣಾ ವ್ಯವಸ್ಥೆ ಮತ್ತು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಪ್ರಕಾಶ್‌ ರಾಜ್‌ ಸೇರಿದಂತೆ ಸಂಘಟನೆಗಳ ಪ್ರತಿನಿಧಿಗಳು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ಚರ್ಚಿಸಿ, ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಪಾರದರ್ಶಕವಾಗಿ ಮತ್ತು ನ್ಯಾಯಸಮ್ಮತವಾಗಿ ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಒತ್ತಾಯವಾಗಿದೆ. ಎಸ್‌ಐಆರ್‌

ಇದನ್ನೂ ನೋಡಿ : SIR ಕರ್ನಾಟಕ | ಮತದಾನದ ಹಕ್ಕಿಗಾಗಿ ಭಿಕ್ಷೆ ಬೇಡುವಂತೆ ಮಾಡಬೇಡಿ: ನಟ ಪ್ರಕಾಶ್ ರಾಜ್ Janashakthi Media

Donate Janashakthi Media

Leave a Reply

Your email address will not be published. Required fields are marked *