ಕೊಪ್ಪಳ: ಇಂದು ಸೋಮವಾರ ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಿಎಸ್‌ಪಿಎಲ್ ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ಮುಂದಾದ ಕ್ರಮ ಖಂಡಿಸಿ ಪರಿಸರ ಹಿತರಕ್ಷಣಾ ವೇದಿಕೆ ಕರೆ ನೀಡಿರುವ ಕೊಪ್ಪಳ ಬಂದ್ ವೇಳೆ ನಡೆಯಿತು.
ಗವಿಮಠದ ಆವರಣದಲ್ಲಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಜಾಥಾಕ್ಕೆ ಚಾಲನೆ ನೀಡಿದರು. ಗವಿಮಠ ಆವರಣ ಗಡಿಯಾರ ಕಂಬ, ಜವಾಹರ ರಸ್ತೆ ಹಾಗೂ ಅಶೋಕ ಸರ್ಕಲ್ ಮೂಲಕ ತಾಲ್ಲೂಕು ಕ್ರೀಡಾಂಗಣದ ತನಕ ಜಾಥಾ ಜರುಗಿತು.
ಇದನ್ನೂ ಓದಿ: ಹಾವೇರಿ| ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ರದ್ದುಪಡಿಸಲು ಹೋರಾಟ ಸಮಿತಿ ಆಗ್ರಹ
ಕಾರ್ಖಾನೆ ಓಡಿಸಿ ಕೊಪ್ಪಳ ಉಳಿಸಿ, ದೂಳು ಮುಕ್ತ ಕೊಪ್ಪಳ ನಮ್ಮ ಗುರಿ ಎನ್ನುವ ಘೋಷಣೆಗಳನ್ನು ಜಾಥಾದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ರಾಜಕೀಯ ಪಕ್ಷಗಳ ನಾಯಕರು ಹಾಗೂ ಹಲವು ಧರ್ಮಗಳ ಗುರುಗಳು ಕೂಗಿದರು.
ಇದನ್ನೂ ನೋಡಿ: ಉಕ್ಕಿನ ಕಾರ್ಖಾನೆ ಸ್ಥಾಪನೆ ಬೇಡ : ಕೊಪ್ಪಳದ ಜನರ ಆಕ್ರೋಶ Janashakthi Media