- ಬೆಂಗಳೂರಿನ ಹಲವು ಖಾಸಗಿ ಶಾಲಾ ಮಕ್ಕಳ ಬ್ಯಾಗ್ ಗಳಲ್ಲಿ ಕಾಂಡೋಮ್ & ಗರ್ಭ ನಿರೋಧಕ ಮಾತ್ರೆ ಪತ್ತೆ
- ಇವುಗಳ ಜೊತೆಗೆ ಸಿಗರೇಟ್, ಲೈಟರ್, ಫೆವಿಕಾಲ್ ಮುಂತಾದ ವಸ್ತುಗಳು ಸಹ ಪತ್ತೆಯಾಗಿವೆ
ಬೆಂಗಳೂರು: ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದಾರೆಯೇ ಎಂದು ಪರಿಶೀಲಿಸಲು ಮುಂದಾದ ನಗರದ ಕೆಲವು ಖಾಸಗಿ ಶಾಲಾ ಸಿಬ್ಬಂದಿಗೆ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಕಂಡ ವಸ್ತುಗಳು ಆಘಾತ ತಂದಿತ್ತು. ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಕಾಂಡೋಮ್‌ಗಳು, ಲೈಟರ್, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು ಗರ್ಭನಿರೋಧಕ ಮಾತ್ರೆ(ಐ-ಪಿಲ್), ನೀರಿನ ಬಾಟಲಿಗಳಲ್ಲಿ ಆಲ್ಕೋಹಾಲ್ ಇರುವುದೂ ಪತ್ತೆಯಾಗಿರುವ ಆಘಾತಕಾರಿ ಸಂಗತಿ ಹೊರಬಿದ್ದಿದೆ.
ತರಗತಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ತರುತ್ತಾರೆ ಎಂದು ಕೆಲವು ಶಿಕ್ಷಕರು ನೀಡಿದ ದೂರಿನ ಮೇರೆಗೆ ವಿದ್ಯಾರ್ಥಿಗಳ ಬ್ಯಾಗ್‌ಗಳನ್ನು ಪರಿಶೀಲಿಸಲು ಕೆಲವು ಶಾಲೆಗಳು ಆರಂಭಿಸಿವೆ. ವಿದ್ಯಾರ್ಥಿಗಳ ಬ್ಯಾಗ್‌ಗಳನ್ನು ಪರಿಶೀಲಿಸುವಂತೆ ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕಾಮ್ಸ್) ಕೂಡ ತನ್ನ ಸದಸ್ಯ ಶಾಲೆಗಳಿಗೆ ಸೂಚಿಸಿತ್ತು.
ಇದನ್ನೂ ಓದಿ : ಶಾಲಾ ಶುಲ್ಕ ಕಟ್ಟಿಲ್ಲ ಎಂದು ಮಕ್ಕಳನ್ನು ಬಿಸಿಲನಲ್ಲಿ ನಿಲ್ಲಿಸಿದ ಖಾಸಗಿ ಶಾಲೆ
ಈ ವೇಳೆ ಕೆಲ ಮಕ್ಕಳ ಬ್ಯಾಗ್‌ಗಳಲ್ಲಿ ಸೆಲ್ಫೋನ್ಗಳು, ಸ್ಮಾರ್ಟ್ಫೋನ್ಗಳು, ಜೊತೆಗೆ ಕಾಂಡೋಮ್‌ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್ಗಳು, ಸಿಗರೇಟ್‌ಗಳು, ಮತ್ತೇರಿಸುವ ವಾಸನೆ ಹೊಂದಿರುವ ವೈಟ್‌ನರ್‌ಗಳು ಮತ್ತು ಹೆಚ್ಚಿನ ಮೊತ್ತದ ನಗದು ಪತ್ತೆಯಾಗಿವೆ. ಈ ಬೆಳವಣಿಗೆಯು ಹಲವು ಶಾಲೆಗಳ ಬೋಧಕ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ‘ಮಕ್ಕಳು ದಾರಿ ತಪ್ಪುತ್ತಿದ್ದಾರೆಯೇ? ಇಂಥ ಮಕ್ಕಳನ್ನು ನಿಭಾಯಿಸುವುದು ಹೇಗೆ’ ಎಂಬ ಗೊಂದಲ ಅವರನ್ನು ಕಾಡುತ್ತಿದೆ.
ಪೆನ್ನು, ಪುಸ್ತಕ, ಪೆನ್ಸಿಲ್, ಟಿಫನ್ ಬಾಕ್ಸ್ ಇರಬೇಕಾದ ಬ್ಯಾಗ್‌ನಲ್ಲಿ ಈ ರೀತಿ ಮಾದಕ ವಸ್ತುಗಳು ಕಂಡು ಬಂದಿರುವುದು ಪೋಷಕರನ್ನು ಚಿಂತೆಗೀಡು ಮಾಡಿದೆ. ಮಕ್ಕಳ ಈ ವರ್ತನೆ ಕುರಿತು ಸರಿಯಾದ ಮಾರ್ಗದರ್ಶನದ ಅವಶ್ಯಕತೆ ಇದೆ ಮನೋವೈದ್ಯರು ಸಲಹೆ ನೀಡಿದ್ದಾರೆ.