ಹಾವೇರಿ: ತಾಲ್ಲೂಕಿನ ದೇವಗಿರಿ ಹತ್ತಿರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ 62 ನೂತನ ಹಾಸ್ಟೆಲ್ ಮಂಜೂರು ಮಾಡಿದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಎಸ್ಎಫ್ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಮಾವೇಶದ ಸ್ವಾಗತ ಸಮಿತಿ ವತಿಯಿಂದ ಅಭಿನಂದನಾ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ತಪ್ಪಿಸಲು ರಾಜ್ಯ ಸರ್ಕಾರ ನೂತನವಾಗಿ 62 ಹಾಸ್ಟೆಲ್ ಮಂಜೂರು ಮಾಡಿರವುದನ್ನು ಎಸ್ಎಫ್ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸ್ವಾಗತ ಸಮಿತಿಯು ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತದೆ.
ಹಿಂದುಳಿದ ಸಮುದಾಯಕ್ಕೆ ಸೇರಿದ ಹತ್ತಾರು, ಸಾವಿರಾರು ವಿದ್ಯಾರ್ಥಿಗಳು ಪ್ರಮುಖವಾಗಿ ತಮ್ಮ ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿವಿಧ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಕ್ಕೆ ಶಿಕ್ಷಣ ಮುಂದುವರಿಸಲು ಬರವ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ಅರಿತುಕೊಂಡ ನಮ್ಮ ಸಂಘಟನೆಯು ನಿರಂತರವಾಗಿ ಹಾಸ್ಟೆಲ್ ಗಾಗಿ ಸಾವಿರಾರು ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದೆ ಜೊತೆಗೆ ಹಾಸ್ಟೆಲ್ ಬಲವರ್ಧನೆಗಾಗಿ ರಾಜ್ಯವ್ಯಾಪ್ತಿ ಶೈಕ್ಷಣಿಕ ಜಾಥಾ ನಡೆಸಿ, ಹಾವೇರಿಯಲ್ಲಿ 29-30 ಅಕ್ಟೋಬರ್ 2025 ರಂದು ಎಸ್ಎಫ್ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಮಾವೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೂತನ ಹಾಸ್ಟೆಲ್ ಮಂಜೂರು ಮಾಡುಂತೆ ಆಗ್ರಹಿಸಿ ಹೋರಾಟದ ನಿರ್ಣಯ ತೆಗೆದುಕೊಂಡಿದ್ದಲ್ಲದೇ ಈ ಕುರಿತು ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಸಿಎಮ್ ಇಲಾಖೆಯ 62 ನೂತನ ಹಾಸ್ಟೆಲ್ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿರುವುದು ಸ್ವಾಗತಾರ್ಹವಾದುದು.
ಇದನ್ನೂ ಓದಿ: ಭೂಪಾಲ್ | ಸರ್ಕಾರಿ ಶಾಲೆಯಲ್ಲಿ ತಟ್ಟೆ ಬದಲಿಗೆ ಪೇಪರ್ ಹಾಳೆಯಲ್ಲಿ ಊಟ ಸವಿಯುತ್ತಿರುವ ವಿಧ್ಯಾರ್ಥಿಗಳು
ನಮ್ಮ ಸಂಘಟನೆಯ ಹೋರಾಟದ ಪರಿಣಾಮವಾಗಿ ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ 100 ಸಂಖ್ಯೆ ಬಲವುಳ್ಳ 62 ಹಾಸ್ಟೆಲ್ ಮಂಜೂರು ಮಾಡಿರುವುದನ್ನು ಮತ್ತು ನಾಲ್ಕು ಐದು ತಿಂಗಳಿಂದ ನೀಡದೆ ಇರುವ ಶುಚಿ ಸಂಭ್ರಮ ಕಿಟ್ ಗಳನ್ನು ಪ್ರತಿ ಹಾಸ್ಟೆಲ್ ಗಳಿಗೆ ವಿತರಣೆ ಮಾಡುತ್ತಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ಸ್ವಾಗತಿಸುತ್ತದೆ. ಅದೇ ರೀತಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ಗಳು ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು. ಹಾಸ್ಟೆಲ್ ಮಂಜೂರು ಮಾಡಲು ಕಾರಣರಾದ ರಾಜ್ಯದ ಮುಖ್ಯಮಂತ್ರಿಗಳಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಿಗೆ, ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತದೆ.


ಹಾಸ್ಟೆಲ್ ಸಮಾವೇಶದಲ್ಲಿ ತೆಗೆದುಕೊಳ್ಳಲಾಗಿದ ನಿರ್ಣಯಗಳಾದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕವಾಗಿ 4500 ರೂ ಆಹಾರ ಭತ್ಯೆ ಹೆಚ್ಚಳಕ್ಕಾಗಿ, ಹಾಸ್ಟೆಲ್ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಲ್ಪಿಸಲು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಜಾರಿಗಾಗಿ, ಹಾಸ್ಟೆಲ್ ನಿಲಯ ಪಾಲಕರು, ಅಡುಗೆ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳ ಖಾಯಂವನೇಮಕಾತಿ ಹಾಗೂ ಸೂಕ್ತ ತರಬೇತಿ ನೀಡುವಂತೆ, ಸರ್ಕಾರದ ಆದೇಶದ ಮೆನು ಅನ್ನು ಹಾಸ್ಟೆಲ್ ಗಳಲ್ಲಿ ಬದಲಾವಣೆ ಮಾಡಿರುವುದನ್ನು ಖಂಡಿಸಿ ಹಾಗೂ ಸರ್ಕಾರದ ಆದೇಶ ಅನ್ವಯ ಆಹಾರ ನೀಡಲು, ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಲು, ತಾಲೂಕು ಮಟ್ಟದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ರಕ್ಷಣೆಗಾಗಿ Anti-Narcotics Committee ಮಾದಕ ದ್ರವ್ಯ ವಿರೋಧಿ ಸಮಿತಿ ರಚನೆಗೆ, ಶಾಲಾ ಕಾಲೇಜುಗಳ ಆರಂಭದ ದಿನದಿಂದಲೇ ವಸತಿ ನಿಲಯ ತೆರೆದು ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಲ್ಪಿಸಲು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆರೋಗ್ಯ ಭದ್ರತೆ ಒದಗಿಸುವಂತೆ ಒತ್ತಾಯಿಸಿ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಹಾಗೂ ಭದ್ರತೆ ಒದಗಿಸುವಂತೆ ಒತ್ತಾಯಿಸಿ ತೆಗೆದುಕೊಳ್ಳಲಾಗಿದ ನಿರ್ಣಯಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸುತ್ತೇವೆ.
ಈ ಸಂದರ್ಭದಲ್ಲಿ ರಾಜ್ಯ ಅಲ್ಪಾ ಸಂಖ್ಯಾತರ ಆಯೋಗದ ಸದಸ್ಯರಾದ ಪರಿಮಳ ಜೈನ್, ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಹಾಸ್ಟೆಲ್ ಉಪ ಸಮಿತಿ ರಾಜ್ಯ ಸಂಚಾಲಕ ಅರುಣ್ ನಾಗವತ್, ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ, ಹಾಸ್ಟೆಲ್ ಘಟಕ ಅಧ್ಯಕ್ಷ ಫಕೀರೆಶ ಮ್ಯಾಗಳಮನಿ, ಬಾಲ ಸಂಘಂನ ಧನುಷ್ ದೊಡ್ಡಮನಿ, ಮುಖಂಡರಾ ಪ್ರೀತಿ ಎಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಕಾರ್ಮಿಕರ ಮಕ್ಕಳ ʼಶಿಕ್ಷಾದೀಪʼ ಸಿoಘ್ವಿ ಚಾರಿಟೇಬಲ್ ಟ್ರಸ್ಟ್ Janashakthi Media
