ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕ ಜಯಗಳಿಸಿದ್ದರು. ಆದರೆ ಈ ವರ್ಷ ಫೆಬ್ರವರಿ 25ರಂದು ಅವರು ನಿಧನ ಹೊಂದಿದ ಹಿನ್ನೆಲೆ ಮೇ 7ರಂದು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಸಲಾಗಿತ್ತು.
ಇದನ್ನು ಓದಿ : ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಪರಿಶ್ರಮ, ಜನರ ಆಶೀರ್ವಾದದಿಂದ ಗೆದ್ದಿದ್ದೇವೆ; ಹೆಚ್.ಡಿ. ಕುಮಾರಸ್ವಾಮಿ
ಉಪಚುನಾವಣೆಗೆ ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಕಣಕ್ಕಿಳಿದರೆ ಬಿಜೆಪಿ-ಜೆಡಿಎಸ್‌ನಿಂದ ಮಾಜಿ ಶಾಸಕ, ಸಚಿವ ರಾಜಾ ನರಸಿಂಹ ನಾಯಕ (ರಾಜೂಗೌಡ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇದೀಗ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ರಾಜಾ ವೇಣುಗೋಪಾಲ ನಾಯಕ 1,14,886 ಮತಗಳನ್ನು ಪಡೆದು ಗೆದ್ದರೆ, ರಾಜೂಗೌಡ 96,566 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.
ಇದನ್ನು ನೋಡಿ : ಬಿಜೆಪಿ ನಿದ್ದೆ ಗೆಡಿಸಿದ ಸಟ್ಟಾ ಬಜಾರ್ : INDIA ಮತ್ತು NDA ನಡುವೆ ತೀವ್ರ ಪೈಪೋಟಿ Janashakthi Media