ಬೆಂಗಳೂರು: “ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದರು. “ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ.
ಇದನ್ನು ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ : ಹೆಚ್.ಡಿ. ರೇವಣ್ಣನಿಗೆ ಮಧ್ಯಂತರ ಜಾಮೀನು
ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ” ಎಂದರು.
ಇಂದು ಅಧಿಕಾರಿಗಳ ಜತೆ ನಡೆದ ಸಭೆ ಬಗ್ಗೆ ಕೇಳಿದಾಗ, “ಬರಗಾಲ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ಮಳೆ ಪರಿಣಾಮ ಕುರಿತು ಪ್ರತ್ಯೇಕ ಸಭೆ ಮಾಡುತ್ತೇನೆ. ಬತ್ತಿ ಹೋಗಿರುವ ಕೆರೆಗಳಿಗೆ ಪರಿಷ್ಕರಿಸಿದ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು” ಎಂದರು.
ಇದನ್ನು ನೋಡಿ : ಶ್ಯಾಮ್ ರಂಗೀಲಾ ಸ್ಪರ್ಧೆಗೆ ಹೆದರಿದ ಪ್ರಧಾನಿ ಮೋದಿ : ನಾಮಪತ್ರ ತಿರಸ್ಕೃತದ ಹಿಂದೆ ಮೋದಿ ಕೈವಾಡ Janashakthi Media