ಕೇಂದ್ರ ಕಾಂಗ್ರೆಸ್ v/s ಯುಪಿ ಕಾಂಗ್ರೆಸ್ | ಮಕರ ಸಂಕ್ರಾಂತಿಯಂದು ರಾಮಮಂದಿರಕ್ಕೆ ತೆರಳಲಿರುವ ರಾಜ್ಯ ಘಟಕ!

ಲಖ್ನೋ: ಅಯೋಧ್ಯೆಯ ರಾಮ ಮಂದಿರವು ಬಿಜೆಪಿ ಮತ್ತು ಆರೆಸ್ಸೆಸ್‌ನ ರಾಜಕೀಯ ಯೋಜನೆಯಾಗಿದ್ದು, ಅಪೂರ್ಣ ದೇವಾಲಯವನ್ನು ಉದ್ಘಾಟಿಸುತ್ತಿರುವುದು ರಾಜಕೀಯ ರಾಭಕ್ಕಾಗಿ ಮಾತ್ರವಾಗಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದ್ದರೂ, ಕಾಂಗ್ರೆಸ್‌ನ ಯುಪಿ ಘಟಕ ಮಕರ ಸಂಕ್ರಾಂತಿಯಂದು ಅಯೋಧ್ಯೆಗೆ ಭೇಟಿ ನೀಡಿ ತಾತ್ಕಾಲಿಕ ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದೆ. ಬಾಬರಿ ಮಸೀದಿ ಒಡೆದು ಕಟ್ಟಿದ ಅಯೋಧ್ಯೆಯ ಈ ಕಟ್ಟಡವನ್ನು ಜನವರಿ 22ರಂದು ಉದ್ಘಾಟನೆ ಮಾಡಲಾಗುತ್ತಿದೆ.

ಹಲವು ಗೊಂದಲಗಳ ನಡುವೆ ಬಾಬರಿ ಮಸೀದಿ ಒಡೆದು ಕಟ್ಟಿದ ಅಯೋಧ್ಯೆಯ ರಾಮಮಂದಿರ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಕಾಂಗ್ರೆಸ್ ಬುಧವಾರ ತೀರ್ಮಾನ ಕೈಗೊಂಡಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ನಿರಾಕರಿಸಿದೆ. ಈ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಅವರು ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಹೇಳಿಕೆ ನೀಡಿದೆ.

ಇದನ್ನೂ ಓದಿ: ಕೇಂದ್ರದಲ್ಲಿ ಅದಾನಿ ಬಗ್ಗೆ ಟೀಕೆ; ತೆಲಂಗಾಣದಲ್ಲಿ ಸಭೆ | ಕಾಂಗ್ರೆಸ್ ದ್ವಿಮುಖ ನೀತಿ?

ಅದಾಗ್ಯೂ, ಯುಪಿ ಕಾಂಗ್ರೆಸ್‌ನ ತನ್ನ ಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದ್ದು, ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್ ಗೌರವಯುತವಾಗಿ ನಿರಾಕರಿಸಿದ್ದರೂ ರಾಜ್ಯ ಘಟಕ ತನ್ನ ಕಾರ್ಯಕ್ರಮವನ್ನು ಮುಂದುವರಿಸಲಿದೆ ಎಂದು ಹೇಳಿದೆ.

ಯುಪಿ ಕಾಂಗ್ರೆಸ್ ತನ್ನ ರಾಜ್ಯ ಉಸ್ತುವಾರಿ ಅವಿನಾಶ್ ಪಾಂಡೆ ಮತ್ತು ಯುಪಿಸಿಸಿ ಮುಖ್ಯಸ್ಥ ಅಜಯ್ ರೈ ಅವರು ಪ್ರಮೋದ್ ತಿವಾರಿ ಮತ್ತು ಪಿಎಲ್ ಪುನಿಯಾ ಸೇರಿದಂತೆ 100 ಸದಸ್ಯರ ನಿಯೋಗವನ್ನು ರಾಮಲಲ್ಲಾನ ದರ್ಶನಕ್ಕಾಗಿ ಅಯೋಧ್ಯೆಗೆ ಕರೆದೊಯ್ಯಲಿದ್ದಾರೆ ಎಂದು ಈ ಹಿಂದೆಯೆ ಘೋಷಿಸಿತ್ತು.

“ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ರಾಜ್ಯದ ಕಾಂಗ್ರೆಸ್ ನಾಯಕರು ನಿಗದಿತ ಕಾರ್ಯಕ್ರಮದ ಪ್ರಕಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಜನವರಿ 22 ರ ‘ಪ್ರಾಣ ಪ್ರತಿಷ್ಠೆ’ಗೆ ಸಂಬಂಧಿಸಿದ ಕಾರ್ಯಕ್ರಮವು ಬೇರೆ ವಿಷಯ” ಎಂದು ಅಜಯ್ ರೈ ಹೇಳಿದ್ದಾರೆ. ಭೇಟಿಯ ಸಮಯದಲ್ಲಿ, ಕಾಂಗ್ರೆಸ್ ನಾಯಕರು ಸರಯು ನದಿಯಲ್ಲಿ ಸ್ನಾನ ಮಾಡಿ ನಂತರ ರಾಮ ಮಂದಿರ ಮತ್ತು ಹನುಮಾನ್ ಗರ್ಹಿಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಆಹ್ವಾನ ವಿಚಾರ | ಕೊನೆಗೂ ತೀರ್ಮಾನ ಕೈಗೊಂಡ ಕಾಂಗ್ರೆಸ್ ಹೇಳಿದ್ದೇನು?

ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸಿಕ್ಕ ವಿಚಾರವಾಗಿ ಬುಧವಾರ ತೀರ್ಮಾನ ಕೈಗೊಂಡಿದ್ದ ಕಾಂಗ್ರೆಸ್, “ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಕಳೆದ ತಿಂಗಳು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ಸ್ವೀಕರಿಸಿದ್ದಾರೆ” ಎಂದು ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ ಹೇಳಿದೆ.

“ಶ್ರೀರಾಮನನ್ನು ನಮ್ಮ ದೇಶದಲ್ಲಿ ಲಕ್ಷಾಂತರ ಜನರು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ಗುರುವಾಗಿದೆ. ಆದರೆ ಆರೆಸ್ಸೆಸ್ ಹಾಗೂ ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನಾಗಿ ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಮುಂದಿಡಲಾಗಿದೆ ಎಂಬುವುದು ಸ್ಪಷ್ಟವಾಗಿದೆ” ಎಂದು ಪಕ್ಷವೂ ಹೇಳಿದೆ.

“2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುತ್ತಲೆ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರೆಸ್ಸೆಸ್‌ ಮತ್ತು ಬಿಜೆಪಿ ಕಾರ್ಯಕ್ರಮದ ಆಹ್ವಾನವನ್ನು ಗೌರವದಿಂದ ನಿರಾಕರಿಸಿದ್ದಾರೆ” ಎಂದು ಕಾಂಗ್ರೆಸ್ ಹೇಳಿದೆ.

ವಿಡಿಯೊ ನೋಡಿ: ಮನೆ ಮನೆಗೆ ಬರುತ್ತಿರುವುದು ಮಂತ್ರಾಕ್ಷತೆಯೇ? ಬಿಜೆಪಿ ಪ್ರಣಾಳಿಕೆಯೇ? ಆರೆಸ್ಸೆಸ್ ಸಿದ್ಧಾಂತವೇ? Janashakthi Media

Donate Janashakthi Media

Leave a Reply

Your email address will not be published. Required fields are marked *