ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಎನ್‌ಸಿಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಮೂರೂ ಪಕ್ಷಗಳ ಪ್ರಚಾರ ಸಭೆಗೆ ರಾಜ್ಯ ನಾಯಕರು ಜೊತೆಯಾದರು.
ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಅವರು ಮಾರ್ಚ್ 24ರಂದು ಕುಟುಂಬದ ಸದಸ್ಯರ ಜೊತೆ ನಾಮಪತ್ರ ಸಲ್ಲಿಸಿದ್ದರೂ ಸಹ ಇಂದು ಮತ್ತೆ ಪಕ್ಷದ ವರಿಷ್ಠರೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು.
ಇದನ್ನು ಓದಿ : ಉಪಚುನಾವಣೆ – ಲೆಕ್ಕಾಚಾರ ಹೇಗಿದೆ? ‘ಸಿಡಿ’ಯುತ್ತಾ ಅಸ್ತ್ರ, ಜಾತಿ, ಹಣದ್ದೆ ಕಾರ್ಬಾರು
ನಾಮಪತ್ರ ಸಲ್ಲಿಕೆಗೆ ಮೊದಲು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಪರವಾಗಿ ರೋಡ್ ಶೋ ನಡೆಸಲಾಯಿತು. ಅಭ್ಯರ್ಥಿ ಮಾಲಾ ನಾರಾಯಣರಾವ್ ಅರೊಂದಿಗೆ ಕೆಪಿಸಿಸಿ ರಾಜ್ಯಾಧ್ಯಾಕ್ಷರಾದ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮ್ಮದ್, ಮಾಜಿ ಸಚಿವರಾದ ಬಿ.ಝಡ್.ಜಮೀರ್ ಅಹಮದ್ ಖಾನ್, ಪ್ರಿಯಾಂಕ ಖರ್ಗೆ ಭಾಗವಹಿಸಿದ್ದರು ಮತ್ತು ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯು ತೇರು ಮೈದಾನದಲ್ಲಿ ನಡೆಯಿತು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.
ಇದನ್ನು ಓದಿ : ತಮ್ಮನ್ನು ತಾವೇ ಮಾರಾಟ ಮಾಡಿಕೊಂಡಿದ್ದರಿಂದ ಮಸ್ಕಿಗೆ ಮತ್ತೆ ಚುನಾವಣೆ : ಸಿದ್ದರಾಮಯ್ಯ
ಇದೇ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರಾದ ರಾಜಶೇಖರ ಪಾಟೀಲ, ರಹೀಂ ಖಾನ್, ವಿಧಾನ ಪರಿಷತ್ ಸದಸ್ಯರಾದ ಸಿ.ಎಂ.ಇಬ್ರಾಹಿಂ, ವಿಜಯಸಿಂಗ್, ಚಂದ್ರಶೇಖರ ಪಾಟೀಲ, ಅರವಿಂದಕುಮಾರ ಅರಳಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.