ಕೇರಳ ವಿಧಾನಸಭಾ ಚುನಾವಣೆ: ಹಾಲಿ ಸಂಸದರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಅಸಮಧಾನ

ವದೆಹಲಿ: ಕೇರಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 37 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಾರ್ಚ್‌ 19ರಂದು ಬಿಡುಗಡೆಗೊಳಿಸಿತ್ತು. ಹಾಲಿ ಸಂಸದರಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದೂ, ಇದರಿಂದಾಗಿ ನಾಯಕರಲ್ಲಿ ಅಸಮಾಧಾನ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಆಡಳಿತಾರೂಢ ಎಲ್‌ಡಿಎಫ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪಣ ತೊಟ್ಟಿರುವ ಕಾಂಗ್ರೆಸ್, ರಾಜ್ಯದಲ್ಲಿ ಪ್ರಾದೇಶಿಕ ನಾಯಕರ ಮೇಲೆ ಹೆಚ್ಚು ನಂಬಿಕೆಯನ್ನಿರಿಸಿದೆ.

ಇದರಿಂದ ಆಕ್ರೋಶಗೊಂಡ ಕಣ್ಣೂರಿನ ಸಂಸದ ಕೆ. ಸುಧಾಕರನ್ ರಾಜೀನಾಮೆ ನೀಡುವುದಾಗಿ ಬೆದರಿಕೆ ಒಡ್ಡಿರುವುದು ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು.

ಇದನ್ನೂ ಓದಿ: ಅತಿಥಿ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅತ್ಯಾಚಾರ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಿರಾಕರಣೆ

ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಗಣಿಸದೇ ಇರುವುದಕ್ಕೆ ಸುಧಾರಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಸತತ ಮಾತುಕತೆಯ ಬಳಿಕ ಸುಧಾಕರನ್ ಅವರನ್ನು ಮನವೊಲಿಸಲು ಪಕ್ಷದ ಹೈಕಮಾಂಡ್ ಯಶಸ್ವಿಯಾಗಿತ್ತು.

ಬಳಿಕ ಹೇಳಿಕೆ ನೀಡಿದ ಸುಧಾಕರನ್, ‘ತಾವು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿದ್ದು, ಪಕ್ಷದ ಅನುಮತಿ ಇಲ್ಲದೆ ಸ್ಪರ್ಧಿಸುವುದಿಲ್ಲ’ ಎಂದು ಸ್ಪಷ್ಟನೆ ನೀಡಿದ್ದರು.

ಇದರೊಂದಿಗೆ ಪಕ್ಷೇತರನಾಗಿ ಕಣಕ್ಕಿಳಿಯುವ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ‘ಸ್ವತಂತ್ರನಾಗಿ ಸ್ಪರ್ಧಿಸುವ ಯಾವುದೇ ಇರಾದೆ ಇಲ್ಲ. ಪಕ್ಷದ ನಿರ್ಧಾರಕ್ಕೆ ತಲೆ ಬಾಗುತ್ತೇನೆ’ ಎಂದು ದೆಹಲಿಯಿಂದ ಕಣ್ಣೂರಿಗೆ ವಿಮಾನದ ಮೂಲಕ ಹೊರಡುವ ಮುನ್ನ ಸುಧಾಕರನ್ ತಿಳಿಸಿದರು.

ಸುಧಾಕರನ್ ಅವರನ್ನು ಮನವೊಲಿಸಲು ಮಾಜಿ ರಕ್ಷಣಾ ಸಚಿವ ಎ.ಕೆ. ಆಯಂಟನಿ ಸೇರಿದಂತೆ ಪ್ರಮುಖ ನಾಯಕರು ಮಾತುಕತೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.

ಹಾಲಿ ಸಂಸದರಿಗೆ ಟಿಕೆಟ್ ನೀಡಬಾರದು ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಒತ್ತಡ ಹೇರಿದ್ದರು ಎಂದು ತಿಳಿದು ಬಂದಿದೆ.

ಕಣ್ಣೂರಿನಿಂದ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಪಕ್ಷವು ಕಣಕ್ಕಿಳಿಸಿದೆ. ಒಟ್ಟಾರೆಯಾಗಿ 92 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಕೇರಳ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ ಮಾರ್ಚ್ 23 ಆಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇದನ್ನೂ ನೋಡಿ: ಓದು ಕಾರ್ಯಾಗಾರ | ವಿದ್ಯಾರ್ಥಿಗಳ ಕಣ್ಣಲ್ಲಿ ಕುವೆಂಪು Janashakthi Media

Donate Janashakthi Media

Leave a Reply

Your email address will not be published. Required fields are marked *